ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ, ಎಲ್ಲಾ ಜಿಲ್ಲೆಗಳಲ್ಲಿ ಜನೋತ್ಸವವ: ಸಚಿವ ವಿ.ಸುನೀಲ್ ಕುಮಾರ್ | JANATA NEWS

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರವು ಒಂದು ವರ್ಷವನ್ನು ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ನಾವು ಜುಲೈ 28ರಿಂದ ಎಲ್ಲಾ ಜಿಲ್ಲೆಗಳಲ್ಲಿ ಜನೋತ್ಸವವನ್ನು ಹಮ್ಮಿಕೊಂಡಿದ್ದೇವೆ. ಇದರ ಸಂಬಂಧ ಮೊದಲ ಕಾರ್ಯಕ್ರಮ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಇರುವ ವ್ಯತ್ಯಾಸ ತುಂಬ ಸರಳ, ನಾವು ಜನರ ಮಧ್ಯೆ ನಮ್ಮ ಸರ್ಕಾರ ಮೂರು ವರ್ಷಗಳ ಅವಧಿಯಲ್ಲಿ ಏನು ಮಾಡಿದೆ ಎಂಬುದನ್ನು ಜನತೆಯ ಮುಂದಿಡುತ್ತೇವೆ, ಆದರೆ ಕಾಂಗ್ರೆಸ್‍ನವರು ವ್ಯಕ್ತಿ ಆಧಾರಿತ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ನಮ್ಮ ಇಂಧನ ಇಲಾಖೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಹೊಸ ಹೊಸ ಯೋಜನೆಗಳನ್ನು ಜನರಿಗೆ ತಲುಪಿಸಲಾಗಿದೆ. ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕ ಇಲ್ಲದ ಮನೆಗಳಿಗೆ ವಿದ್ಯುತ್ ಸಂಪರ್ಕ ಕೊಡಲಾಗಿದೆ. ಪರಿಶಿಷ್ಟ ಜಾತಿ, ಪಂಗಡದವರಿಗೆ 75 ಯೂನಿಟ್ ಉಚಿತ ವಿದ್ಯುತ್ ಕೊಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕ ಇಲ್ಲದ ಮನೆಗಳಿಗೆ ವಿದ್ಯುತ್ ಸಂಪರ್ಕ ಕೊಡಲಾಗಿದೆ. ಪರಿಶಿಷ್ಟ ಜಾತಿ, ಪಂಗಡದವರಿಗೆ 75 ಯೂನಿಟ್ ಉಚಿತ ವಿದ್ಯುತ್ ಕೊಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಟ್ರಾನ್ಸ್‍ಫಾರ್ಮರ್ ನಿರ್ವಹಣಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಒಂದು ವಾರದಲ್ಲಿ ಸುಮಾರು 3.5 ಲಕ್ಷದಿಂದ 4 ಲಕ್ಷ ಟ್ರಾನ್ಸ್‍ಫಾರ್ಮರ್ ನಿರ್ವಹಣೆ ಮಾಡಲಾಗಿದೆ ಎಂದು ವಿವರಿಸಿದರು.
ನಾವು ಜನರನ್ನು ಕಣ್ಮುಂದೆ ಇಟ್ಟುಕೊಂಡು ಜನೋತ್ಸವ ಮಾಡಿದರೆ, ಕಾಂಗ್ರೆಸ್‍ನವರು ವ್ಯಕ್ತಿಯನ್ನು ಕಣ್ಮುಂದೆ ಇಟ್ಟುಕೊಂಡು ವ್ಯಕ್ತಿಯ ಉತ್ಸವ ಮಾಡುತ್ತಿದ್ದಾರೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವ್ಯತ್ಯಾಸ ಎಂದು ವಿವರಿಸಿದರು. ನಾವು ಯಾವತ್ತೂ ವ್ಯಕ್ತಿಯನ್ನು ಆರಾಧಿಸಲಿಲ್ಲ. ನಾವು ವಿಚಾರ, ಜನರನ್ನು ಆರಾಧಿಸಿದ್ದೇವೆ. ವ್ಯಕ್ತಿ ಆರಾಧಿಸುವ ಅವರು ಸಿದ್ದರಾಮೋತ್ಸವ ಮಾಡುತ್ತಿದ್ದಾರೆ ಎಂದು ಹೇಳಿದರು
ಯಾವುದೇ ರಾಜಕೀಯ ಪಕ್ಷ ಒಂದು ಸಮುದಾಯವನ್ನು ನಂಬಿಕೊಂಡು ಸರ್ಕಾರ ಮುನ್ನಡೆಸಲು ಸಾಧ್ಯವಿಲ್ಲ. ಸಮಾಜದಲ್ಲಿರುವ ಪ್ರತಿಯೊಂದು ಸಮುದಾಯಗಳಿಗೆ ಅವಕಾಶ ಕೊಟ್ಟರೆ ಮಾತ್ರ ಸಮಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತದೆ ಎಂದರು.
ಬಿಜೆಪಿ ಎಲ್ಲ ಸಮಾಜಕ್ಕೂ ಸಾಮಾಜಿಕ ನ್ಯಾಯ ಒದಗಿಸುವ ರಾಜಕೀಯ ಪಕ್ಷ, ಹೀಗಾಗಿಯೇ ಇಲ್ಲಿ ಎಲ್ಲರಿಗೂ ಅವರವರ ಸಾಮಥ್ರ್ಯಕ್ಕೆ ತಕ್ಕಂತೆ ಸ್ಥಾನಮಾನಗಳು ಸಿಗುತ್ತವೆ, ಬೇರೆ ಪಕ್ಷದಂತೆ ಬಿಜೆಪಿ ವ್ಯಕ್ತಿ ಇಲ್ಲವೇ ಕುಟುಂಬ ಆಧಾರಿತ ಪಕ್ಷವಲ್ಲ ಎಂದು ಸುನೀಲ್‍ಕುಮಾರ್ ವಾಗ್ದಾಳಿ ನಡೆಸಿದರು.
ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ಅವರ ಕುಟುಂಬದವರು ಯಾವುದೇ ತಪ್ಪು ಮಾಡಿಲ್ಲ ಎಂದರೆ ಯಾವುದೇ ತನಿಖೆ ಸಂಸ್ಥೆಗೂ ಹೆದರಬೇಕಾದ ಅಗತ್ಯವಿಲ್ಲ, ಯಾರು ತಪ್ಪು ಮಾಡುತ್ತಾರೋ ಅವರು ಹೆದರುತ್ತಾರೆ. ನಾವು ತಪ್ಪು ಮಾಡಿಲ್ಲ ಎಂದಾದಾಗ ಇಡಿಗೆ ಭಯಪಡಬೇಕಾದ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.