Thu,Sep29,2022
ಕನ್ನಡ / English

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟರ್ ಭೀಕರ ಹತ್ಯೆ : ಪ್ರತಿಭಟಿಸಿದ ಕಾರ್ಯಕರ್ತರ ಮೇಲೆ ಲಾಟಿಚಾರ್ಜ್ | JANATA NEWS

27 Jul 2022
656

ಸೂಳ್ಯ : ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸಮಿತಿ ಸದಸ್ಯ ಪ್ರವೀಣ್ ನೆಟ್ಟರ್ ಅವರನ್ನು ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿರುವ ಅವರ ಮಾಂಸದ ಮಾಂಸದ ಅಂಗಡಿಯ ಮುಂದೆ ಮಂಗಳವಾರ ರಾತ್ರಿ ಅಪರಿಚಿತರು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕಡಿದು ಹತ್ಯೆ ಮಾಡಿದ್ದಾರೆ.

ಪ್ರವೀಣ್ ನೆಟ್ಟರ್ ಅವರಿಗೆ ಅಂತಾರಾಷ್ಟ್ರೀಯ ಸಂಖ್ಯೆಗಳಿಂದ ಬೆದರಿಕೆ ಕರೆಗಳು ಬಂದಿದ್ದವು, ಈ ಬಗ್ಗೆ ಬಿಜೆಪಿ ನಾಯಕರ ಬಳಿ ಹೇಳಿದ್ದರೂ ಭದ್ರತೆ ಕಲ್ಪಿಸಲು ಏನೂ ಮಾಡಿಲ್ಲ, ಎಂದು ವರದಿಯಾಗಿದೆ.

ನ್ಯಾಯಕ್ಕಾಗಿ ಆಗ್ರಹಿಸಿ ಹಲವು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿ "ನಮಗೆ ನ್ಯಾಯ ಬೇಕು", ಎಂಬ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಟಿ ಪ್ರಹಾರ ನಡೆಯಿಸಿದ್ದಾರೆ.

ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಪ್ರತಿಕ್ರಿಯೆ ನೀಡಿ, ಸುಳ್ಯದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ. ಇಂತಹ ಅಮಾನವೀಯ ಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಲಾಗುವುದು, ಮೃತ ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ದೇವರು ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಓಂ ಶಾಂತಿಃ.. ಹಂತಕರನ್ನು ಪತ್ತೆ ಹಚ್ಚಲು ಈಗಾಗಲೇ ಪೊಲೀಸ್ ತಂಡ ಕಾರ್ಯಚರಣೆ ಕೈಗೊಂಡಿದೆ. ಈ ಸಂದರ್ಭದಲ್ಲಿ, ಸಾರ್ವಜನಿಕರು ಶಾಂತಿಯಿಂದ ವರ್ತಿಸಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸಹಕರಿಸಬೇಕೆಂದು ವಿನಂತಿಸುತ್ತೇನೆ, ಎಂದು ಟ್ವೀಟ್ ಮಾಡಿದ್ದಾರೆ.

ಇನ್ನೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ, ಎಂದಿದ್ದಾರೆ.

RELATED TOPICS:
English summary : Brutal killing of BJP worker Praveen Netter: Lattice on protesting workers

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...