Sun,May19,2024
ಕನ್ನಡ / English

ಪ್ರವೀಣ್ ಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ರಾಜೀನಾಮೆ: ರೇಣುಕಾಚಾರ್ಯ | JANATA NEWS

27 Jul 2022
2774

ಬೆಂಗಳೂರು : ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಎಲ್ಲ ತ್ಯಾಗಕ್ಕೂ ಸಿದ್ಧ. ನಾನು ರಾಜೀನಾಮೆ ನೀಡಲು ಸಿದ್ಧ. ಕಾರ್ಯಕರ್ತರು ಏನ್ ಹೇಳ್ತಾರೆ ಅದನ್ನ ಕೇಳ್ತೀನಿ. ಕ್ಷೇತ್ರಕ್ಕೆ ನಾಳೆ ಹೋಗ್ತೀನಿ, ಕಾರ್ಯಕರ್ತರ ಹೇಳಿದನ್ನ ಕೇಳ್ತೀನಿ. ಅಧಿಕಾರಕ್ಕೆ ನಾನು ಅಂಟು ಕೂರಲ್ಲ ನಾನು ಎಂದರು.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳು ನೆಡೆಯುತ್ತಿದ್ದು, ರಾಜ್ಯದ ಉದ್ದಗಲಕ್ಕೆ ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.

ನಮ್ಮ ಸರ್ಕಾರ ಶ್ರೀ ಯೋಗಿ ಆದಿತ್ಯನಾಥ್ ಜಿ ಅವರ ಸರ್ಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಮ್ಮ ಸರ್ಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ. ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ?.

ಪ್ರತಿ ಬಾರಿ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಿಂದ ಏನೂ ಪ್ರಯೋಜನವಿಲ್ಲ. ಹಿಂದೂ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳ ಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್ಕೌಂಟರ್ ಮಾಡಬೇಕು.

ನನಗೆ ವೈಯಕ್ತಿಕವಾಗಿ ಅಧಿಕಾರಕ್ಕಿಂತ ನಮ್ಮ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ, ಆದ್ದರಿಂದ ನಮ್ಮ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ನನ್ನ ಮತ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚರ್ಚಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಯೋಚಿಸುತ್ತಿದ್ದೇನೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

RELATED TOPICS:
English summary :If strict action is not taken against Praveen s killers, resign: Renukacharya

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...