Fri,Aug12,2022
ಕನ್ನಡ / English

ಪ್ರವೀಣ್ ಹತ್ಯೆ ಪ್ರಕರಣ: ಕೇರಳದಲ್ಲೂ ಆರೋಪಿಗಳಿಗಾಗಿ ಹುಡುಕಾಟ, 10 ಆರೋಪಿಗಳ ಬಂಧನ | JANATA NEWS

27 Jul 2022
423

ಬೆಂಗಳೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವಾರಜ ಬೊಮ್ಮಾಯಿ, ಸಿಟಿ ರವಿ ಜೊತೆಗೆ ಸಭೆ ನಡೆಸಿ ಮಾತನಾಡಿದ ಅವರು, ಪ್ರವೀಣ್ ಹತ್ಯೆ ಘಟನೆ ಬಗ್ಗೆ ಸಿಎಂ ಜೊತೆ ಮಾತನಾಡಿದ್ದೇವೆ. ಪ್ರವೀಣ್ ಅಂತ್ಯಕ್ರಿಯೆ ನೆರವೇರಿದೆ. ಪ್ರಕರಣ ಸಂಬಂಧ ಏನೆಲ್ಲ ಬೆಳವಣಿಗೆಯಾಗಿದೆ ಅದನ್ನ ಪ್ರವೀಣ್ ಸೂದ್ ವಿವರಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದೇವೆ. ಸದ್ಯ 10 ಜನರನ್ನ ವಶಕ್ಕೆ ಪಡೆದಿದ್ದಾರೆ. ಕೇರಳಕ್ಕೆ ತೆರಳಿ ಸಹ ಸರ್ಚ್ ಮಾಡುತ್ತಿದ್ದಾರೆ ಎಂದಿದ್ದಾರೆ.

ಕೇರಳಕ್ಕೂ ಪೊಲೀಸರು ತೆರಳಿದ್ದು, ಅಲ್ಲಿಯೂ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ನಾವು ಇಂತಹ ಘಟನೆ ನಡೆದಾಗ ಯಾವ ಪ್ರಕರಣಗಳನ್ನು ಬಿಟ್ಟಿಲ್ಲ, ಎಲ್ಲವೂ ತನಿಖೆಯಾಗಿವೆ. ಕೇರಳ ಸರಕಾರದ ಜೊತೆಗೆ ನಮ್ಮ ಡಿಜಿ ಮಾತನಾಡಿದ್ದಾರೆ, ಜಂಟಿಯಾಗಿ ಕಾರ್ಯಾಚಾರಣೇ ಮಾಡಿ ಆರೋಪಿಗಳನ್ನು ಹಿಡಿದು ತರಲಾಗುತ್ತದೆ ಎಂದು ತಿಳಿಸಿದರು.

ಈಗಾಗಲೇ ಶಂಕಿತರ ಬೆನ್ನು ಹತ್ತಿದ್ದಾರೆ. ಕೇರಳಕ್ಕೆ ಒಂದು ತಂಡ ಕಳಿಸಲಾಗಿದೆ. ಇಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಅನ್ನೋದರ ಬಗ್ಗೆ ತನಿಖೆಯಾಗ್ತಿದೆ. ಕೆಲವು ಶಂಕಿತರನ್ನ ವಶಕ್ಕೆ ಪಡೆಯಲಾಗಿದೆ, ವಿಚಾರಣೆ ನಡೆಯುತ್ತಿದೆ ಎಂದಿದ್ದಾರೆ

ಸಾಮಾಜಿಕ ಜಾಲಾತಾಣದಲ್ಲಿ ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿರುವುದರ ಬಗ್ಗೆ ಮಾತನಾಡಿ, ಅಮಾಯಕರು ಕೊಲೆಯಾದಾಗ ಎಲ್ಲರಿಗೂ ನೋವುಂಟಾಗಲಿದೆ, ಮನಸ್ಸು ಕಲಕುತ್ತದೆ, ಸಿಟ್ಟು ಉಂಟಾಗಿ ಮಾತನಾಡುತ್ತಾರೆ, ಆರೋಪಿಗಳನ್ನು ಬಂಧಿಸಿದ ಮೇಲೆ ಅವರ ಆಕ್ರೋಶ ಕಡಿಮೆಯಾಗಲಿದೆ ಎಂದು ತಿಳಿಸಿದರು

RELATED TOPICS:
English summary :Praveen murder case: Search for accused in Kerala too, arrest of 10 accused

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...