Thu,Sep29,2022
ಕನ್ನಡ / English

ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಕೈತಪ್ಪಿರುವ ಕಾರಣ ಯೋಗಿ ಮಾಡೆಲ್ ಕುರಿತು ಮಾತನಾಡುತ್ತಿದ್ದಾರೆ! | JANATA NEWS

29 Jul 2022
663

ಬೆಂಗಳೂರು : ಕಾನೂನು ಸುವ್ಯವಸ್ಥೆ ಕೈಮೀರುತ್ತಿದೆ. ಆದರೂ ಯೋಗಿ ಆದಿತ್ಯನಾಥ್​ರ ಯುಪಿ ಮಾಡೆಲ್ ಬಗ್ಗೆ ಮಾತನಾಡುತ್ತಿದ್ದೀರಾ? ಕುವೆಂಪು, ಬಸವಣ್ಣ ಮಾಡೆಲ್​ ಎಲ್ಲಿ ಹೋಯ್ತು? ಪರಿಸ್ಥಿತಿ ಕೈತಪ್ಪಿರುವ ಕಾರಣ ಯೋಗಿ ಮಾಡೆಲ್ ಕುರಿತು ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಕುರ್ಚಿಗಾಗಿ ಆರ್‌ಎಸ್‍ಎಸ್‍ನ ಕೈಗೊಂಬೆಯಾಗಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಅವರ ತಂದೆ ಎಸ್.ಆರ್ ಬೊಮ್ಮಾಯಿ ಹೀಗಿರಲಿಲ್ಲ. ಅವರು ವಿಶಾಲ ಮನಸ್ಥಿತಿ ಹೊಂದಿದ್ದರು. ಆದರೆ, ಸಿಎಂ ಆರ್‌ಎಸ್‌ಎಸ್ ತಾಳಕ್ಕೆ ಕುಣಿಯುತ್ತಿದ್ದಾರೆ. ಕಳೆದ ಹತ್ತು ದಿನಗಳಲ್ಲಿ ಮೂವರ ಹತ್ಯೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಗೃಹ ಸಚಿವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಖಾಕಿ ಬಗ್ಗೆ ಭಯವೂ ಇಲ್ಲ, ಗೌರವವೂ ಇಲ್ಲ.

ನಿನ್ನೆ ಸಿಎಂ, ಪ್ರವೀಣ್ ಸಂತಾಪಕ್ಕೆ ತೆರಳಿದ್ದರು. ಆಗ ಕೆಲವೇ ಘಂಟೆಗಳಲ್ಲಿ ಮತ್ತೊಂದು ಕೊಲೆಯಾಗುತ್ತೆ. ಇದರಲ್ಲಿ ಗುಪ್ತಚರ ಸಂಪೂರ್ಣ ವಿಫಲವಾಗಿದೆ. ಇದನ್ನು ನೋಡಿದರೆ ಕಾನೂನು ಸುವ್ಯವಸ್ಥೆ ಎಲ್ಲಿದೆ ಎಂಬ ಪ್ರಶ್ನೆ ಮೂಡುತ್ತೆ ಎಂದು ಟೀಕಿಸಿದರು.

ಖಾಕಿ ಬಗ್ಗೆ ಭಯ ಇದೆ ಅಂತಾ ಹೇಳಲು ಆಗುತ್ತಿದೆಯಾ? ಎಸ್‍ಡಿಪಿಐ, ಪಿಎಫ್‍ಐರನ್ನು ಬೆಳೆಸುತ್ತಿರುವುದು ಬಿಜೆಪಿಯೇ. ಇದನ್ನು ಸ್ವತಃ ಆರ್‌ಎಸ್‍ಎಸ್‍ನ ಪ್ರಮುಖರು ಹೇಳುತ್ತಿದ್ದಾರೆ. ಇವರು ಕಾಂಗ್ರೆಸ್‍ಗೆ ಉತ್ತರ ಕೊಡುವುದು ಬೇಡ. ಅವರದೇ ಪಕ್ಷದ ಕಾರ್ಯಕರಿಗೆ ಉತ್ತರಿಸಲಿ ಎಂದಿದ್ದಾರೆ.

ಕಾನೂನು ಸುವ್ಯವಸ್ಥೆ ಕೈಮೀರುತ್ತಿದೆ. ಆದರೂ ಯೋಗಿ ಆದಿತ್ಯನಾಥ್​ರ ಯುಪಿ ಮಾಡೆಲ್ ಬಗ್ಗೆ ಮಾತನಾಡುತ್ತಿದ್ದೀರಾ? ಕುವೆಂಪು, ಬಸವಣ್ಣ ಮಾಡೆಲ್​ ಎಲ್ಲಿ ಹೋಯ್ತು? ಪರಿಸ್ಥಿತಿ ಕೈತಪ್ಪಿರುವ ಕಾರಣ ಯೋಗಿ ಮಾಡೆಲ್ ಕುರಿತು ಮಾತನಾಡುತ್ತಿದ್ದಾರೆ. ಗಟ್ಟಿಯಾದ ಗೃಹ ಸಚಿವರನ್ನ ಕೇಳುತ್ತಿರೋದು ಅವರದೇ ಪಕ್ಷದ ಯತ್ನಾಳ್ ಅಲ್ಲವಾ? ಇವರಿಗೆ ಯಾಕೆ ಆರಗ ಜ್ಞಾನೇಂದ್ರರನ್ನು ಬದಲಾಯಿಸಲು ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರದಿಂದ ಈಗ 25 ಲಕ್ಷ ಪರಿಹಾರ ಕೊಡುತ್ತಿದ್ದಾರೆ. ಪರಿಹಾರ ಕೊಡುವುದಿದ್ದರೆ ಎಲ್ಲರಿಗೂ ಕೊಡಲಿ. ಇದರಲ್ಲಿ ತಾರತಮ್ಯ ಏಕೆ? ಅಷ್ಟಕ್ಕೂ ಇದನ್ನು ಯಾವುದರಿಂದ ಕೊಡುತ್ತಿದ್ದಾರೆ. ಕೊರೊನಾ ಫಂಡ್‍ನಿಂದ ಪರಿಹಾರ ಕೊಡುತ್ತಿದೆ. ಹಾಗಾದರೆ ಮುಖ್ಯಮಂತ್ರಿಗಳ ಪರಿಹಾರ ನಿಧಿ ಏನಾಯಿತು? ಹರ್ಷ ಕುಟುಂಬಕ್ಕೆ ಕೊರೊನಾ ಫಂಡ್‍ನಿಂದ ಪರಿಹಾರ ನೀಡಿದ್ದರು. ನಿನ್ನೆ ಪ್ರವೀಣ್ ಕುಟುಂಬಕ್ಕೆ ಯಾವ ಫಂಡ್‍ನಿಂದ ಕೊಟ್ಟರೋ ಗೊತ್ತಿಲ್ಲ

RELATED TOPICS:
English summary :CM Bommai is a puppet of RSS for the CM chair

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...