Thu,Sep29,2022
ಕನ್ನಡ / English

ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಈಗ ಬುಲ್ಡೋಜರ್ ಜಪ ಮಾಡುತ್ತಿದ್ದಾರೆ | JANATA NEWS

29 Jul 2022
768

ಬೆಂಗಳೂರು : ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಈಗ ʼಬುಲ್ಡೋಜರ್ʼ ಜಪ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೊಮ್ಮಾಯಿ ಅವರು ಇಡೀ ಕರ್ನಾಟಕದ ಮುಖ್ಯಮಂತ್ರಿ. ಕೇವಲ ಬಿಜೆಪಿಗಷ್ಟೇ ಅಲ್ಲ. ನಿನ್ನೆಯ ದಿನ ಅವರು ಮಸೂದ್ ಮತ್ತು ಪ್ರವೀಣ್ ನಿಟ್ಟಾರು ಹತ್ಯೆಯಾದ ಬೆಳ್ಳಾರೆ ಗ್ರಾಮಕ್ಕೆ ಭೇಟಿ ನೀಡಿದಾಗ ಸಂವಿಧಾನದತ್ತವಾಗಿ ಸ್ವೀಕರಿಸಿದ ಪ್ರಮಾಣ ವಚನದ ಪಾವಿತ್ರ್ಯತೆಗೆ ಚ್ಯುತಿ ತಂದಿದ್ದಾರೆ. ಕೊಲೆಗೆ ಕೊಲೆಯೇ ಉತ್ತರವಲ್ಲ. ಪ್ರತೀಕಾರಕ್ಕೆ ಪ್ರತೀಕಾರ ಪ್ರತ್ಯುತ್ತರವಲ್ಲ. ಮುಖ್ಯಮಂತ್ರಿ ನಡೆ ಹಿಂಸೆಯನ್ನು ಪ್ರಚೋದಿಸುವಂತಿದೆ. ಕೊಲೆಯಾದ ಇಬ್ಬರೂ ಯುವಕರ ಮನೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ ಕೊಲೆಗೆಡುಕರಿಗೆ ಕಠಿಣ ಸಂದೇಶ ರವಾನಿಸಬೇಕಿತ್ತು. ಹಾಗೆ ಮಾಡಲಿಲ್ಲ ಎಂದಿದ್ದಾರೆ.

ರಕ್ತದಲ್ಲಿ ಜಾತಿ-ಧರ್ಮಗಳ ಗುಂಪುಗಳಿವೆಯಾ? ಅಷ್ಟು ಸರಳ ವಿಷಯ ಮುಖ್ಯಮಂತ್ರಿಗೆ ಗೊತ್ತಿಲ್ಲದಿದ್ದರೆ ಹೇಗೆ? ಅವರು ಇದ್ದಾಗಲೇ ಮಂಗಳೂರಿನಲ್ಲಿ ಇನ್ನೊಂದು ಕೊಲೆ ನಡೆಯಿತು ಎಂದರೆ ಆಡಳಿತ ವೈಫಲ್ಯಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾ? ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಈಗ ʼಬುಲ್ಡೋಜರ್ʼ ಜಪ ಮಾಡುತ್ತಿದ್ದಾರೆ. ʼಯೋಗಿ ಅದಿತ್ಯನಾಥ್ ಮಾದರಿʼ ಎನ್ನುತ್ತಿದ್ದಾರೆ. ಉತ್ತರ ಪ್ರದೇಶದ ಎನ್ನುವುದು ಕರ್ನಾಟಕಕ್ಕೆ ಮಾತ್ರವಲ್ಲ, ಯಾರಿಗೂ ಮಾದರಿ ಅಲ್ಲ. ಸಹಜ ನ್ಯಾಯ, ಸಂವಿಧಾನಕ್ಕೆ ವಿರುದ್ಧದ ಉತ್ತರಪ್ರದೇಶದ ಆಡಳಿತವನ್ನು ಮಾದರಿ ಅನುಕರಣೆ ಎನ್ನುವುದು ಹೊಣೆಗೇಡಿತನದ ಪರಮಾವಧಿ ಎಂದು ಎಚ್ಡಿಕೆ ಕಟುವಾಗಿ ಟೀಕೆ ಮಾಡಿದ್ದಾರೆ.

ಸಂವಿಧಾನದ ಮೇಲೆ ಗೌರವ ಇಲ್ಲದವರು ʼಬುಲ್ಡೋಜರ್ʼ ಬಗ್ಗೆ ಮಾತನಾಡುತ್ತಾರೆ. ದಕ್ಷತೆ ಇಲ್ಲದವರು ಅಕ್ಕಪಕ್ಕದ ಮಾದರಿಗಳನ್ನು ಹುಡುಕುತ್ತಾರೆ. ಜನತಾ ಪರಿವಾರಿ ಆಗಿದ್ದವರು ಈಗ ಸಂಘ ಪರಿವಾರಿಯಾಗಿ ರೂಪಾಂತರಗೊಂಡು ಉತ್ತರ ಪ್ರದೇಶದ ಮಾದರಿ ಹೆಸರಿನಲ್ಲಿ ರಾಜ್ಯಕ್ಕೆ ʼಹೊಸ ಮಾರಿʼಯನ್ನು ತರಲು ಹೊರಟಿದ್ದಾರೆ. ಇದು ಬೇಕಿಲ್ಲ. ಎಂ.ಎನ್.ರಾಯ್ ಅವರ ಅನುಯಾಯಿ, ಜನತಾ ಪರಿವಾರದ ರಾಯಿಸ್ಟ್ ಎಂದೇ ಖ್ಯಾತರಾಗಿದ್ದ ಎಸ್.ಆರ್.ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಈಗ ಸಂವಿಧಾನ ವಿರೋಧಿಯಾದ ಬುಲ್ಡೋಜರ್ ಮಾದರಿ ಮಾತನಾಡುತ್ತಿರುವುದು ನನಗೆ ಅತೀವ ಆಘಾತ ಉಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜಧರ್ಮ ಪಾಲಿಸಿ ಎಂದು ಹಿಂದೊಮ್ಮೆ ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದ್ದರು. ರಾಜಧರ್ಮ ಪಾಲಿಸುವುದಿರಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಧರ್ಮವೇ ಹೇಳಿದ ʼಸರ್ವೇ ಜನೋ ಸುಖಿನೋ ಭವಂತುʼ ಎನ್ನುವ ತತ್ತ್ವವನ್ನೂ ಪಾಲಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

RELATED TOPICS:
English summary :Bommai is now chanting bulldozer to cover up the failure

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...