Fri,Aug12,2022
ಕನ್ನಡ / English

ಕಾರ್ಯಕ್ರಮಕ್ಕೆ ತಂದೆ ಬರಲಾಗಲಿಲ್ಲ ಎಂದು ಭಾವುಕರಾದ ಹೆಚ್ ಡಿ ಕುಮಾರಸ್ವಾಮಿ! | JANATA NEWS

31 Jul 2022
396

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ವ್ಯಾಪ್ತಿಯ ಸೋಮನಹಳ್ಳ ಅಮ್ಮನವರ ದೇಗುಲ ಆವರಣದಲ್ಲಿ ಇಂದು ಭಾನುವಾರ ಜೆಡಿಎಸ್ ಸಮಾವೇಶ ಆಯೋಜನೆಗೊಂಡಿತ್ತು.

ಸಮಾವೇಶದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಭಾಷಣ ಮಾಡಿದ್ರು. ಈ ಭಾಷಣವನ್ನು ಮನೆಯಲ್ಲಿ ಕುಳಿತು ಹೆಚ್ ಡಿ ದೇವೇಗೌಡರು ಮನೆಯಲ್ಲಿ ಕುಳಿತಿರುವ ದೃಶ್ಯವನ್ನು ತೋರಿಸಲಾಯಿತು. ದೃಶ್ಯವನ್ನು ಸಮಾವೇಶದ ವೇದಿಕೆಯಲ್ಲಿ ಕಂಡು ಶಾಸಕ ಹೆಚ್​.ಡಿ ರೇವಣ್ಣ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಕಾರ್ಯಕ್ರಮಕ್ಕೆ ತಂದೆ ಬರಲಾಗಲಿಲ್ಲ ಎಂದು ರೇವಣ್ಣ ಭಾವುಕರಾದ್ರು.

ಸೋದರನ ಕಣ್ಣಲ್ಲಿ ನೀರು ಕಂಡು ಹೆಚ್ ಡಿ ರೇವಣ್ಣ ಅವರು ಸಹ ವೇದಿಕೆಯಲ್ಲಿ ಕಣ್ಣೀರು ಹಾಕಿದರು. ಭಾಷಣ ಮುಗಿಸಿ ಟವೆಲ್ ಹಿಡಿದುಕೊಂಡು ಬಂದು ಅಳುತ್ತಾ ಕುಳಿತ ಹೆಚ್ ಡಿಕೆಯನ್ನು ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಸಮಾಧಾನಪಡಿಸಿದರು.

ಕಣ್ಣೀರು ಹಾಕುತ್ತಾ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಸಾಲಮನ್ನಾದಿಂದ ರೈತರಿಗೆ ಬದುಕು ಶಾಶ್ವತವಾಗಿ ಸಿಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆಲ್ಲಿಸಿ 5 ವರ್ಷ ನನಗೆ ಆಡಳಿತ ಕೊಟ್ಟರೆ ರೈತರು ಸಾಲಗಾರರಾಗದಿರುವಂತಹ ರೀತಿಯಲ್ಲಿ ನಾನು ಮಾಡುತ್ತೇನೆ. ರಾಜ್ಯಕ್ಕೆ ಯಾವ ರೀತಿ ಯೋಜನೆಗಳನ್ನು ಕೊಡುತ್ತೇನೆ ಎಂದು ಮನೆಮನೆಗೆ ಪ್ರಣಾಳಿಕೆ ಕಳುಹಿಸುತ್ತೇನೆ ಎಂದು ಘೋಷಿಸಿದರು. ನಾಡಿನ ಹೆಣ್ಣುಮಕ್ಕಳು ಸ್ವಾಭಿಮಾನದಿಂದ ಬದುಕಬೇಕು, ಹಳ್ಳಿಯಲ್ಲಿರುವ ಶಿಕ್ಷಣವಂಚಿತ ಹೆಣ್ಣುಮಕ್ಕಳಿಗೆ ಆಸರೆಯಾಗುವ ಯೋಜನೆ ಸಿದ್ಧಪಡಿಸಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ಮಾತಾಡಿದ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಮಂಡ್ಯ ಜಿಲ್ಲೆಗೆ ಹೆಚ್. ಡಿ ಕುಮಾರಸ್ವಾಮಿ ಅವರು ಅಪಾರ ಕೊಡುಗೆ ನೀಡಿದ್ದಾರೆ. 2004ರಿಂದ 2008ರ ವರೆಗೆ ಅತಿ ಹೆಚ್ಚು ಪವರ್ ಸ್ಟೇಷನ್ ಕೊಟ್ಟಿದ್ದು ಹೆಚ್.ಡಿ ಕುಮಾರಸ್ವಾಮಿ, ಇಂಧನ ಇಲಾಖೆಗೆ ಇವತ್ತು 29 ಸಾವಿರ ಕೋಟಿ ನಷ್ಟ ಎದುರಿಸುತ್ತಿದೆ. ಮೊದಲು ಇಂಧನ ಇಲಾಖೆ ಕೆಲಸಕ್ಕೆ ಮಂಗಳೂರಿಗೆ ಹೋಗ್ಬೇಕಿತ್ತು. ಚೆಸ್ಕಾಂ ಅಂತಾ ಮೈಸೂರಿನಲ್ಲೇ ಕೆಲಸ ಆಗುವಂತೆ ಮಾಡಿದ್ದು ನಾವು. ಜಿಲ್ಲೆಯ ರಸ್ತೆ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ಕೊಟ್ಟಿದ್ದೆವು. ಮಂಡ್ಯದವರೇ ಸಿಎಂ ಇದ್ದರೂ ಯಾವುದೇ ಬಿಡಿಗಾಸು ಕೊಡಲಿಲ್ಲ. ಮಂಡ್ಯಕ್ಕೆ ಕೊಟ್ಟ ಅನುದಾನ ತಡೆ ಹಿಡಿದಿದ್ದು ಯಡಿಯೂರಪ್ಪ, ಭ್ರಷ್ಟಾಚಾರದಲ್ಲಿ ತುಂಬಿ ತುಳುಕುತ್ತಿರುವ ಸರ್ಕಾರ ಬಿಜೆಪಿಯದ್ದು ಎಂದು ರೇವಣ್ಣ ಕಿಡಿಕಾರಿದ್ರು.

RELATED TOPICS:
English summary :HD Kumaraswamy and Revanna are emotional that their father could not come to the program!

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ
ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...