ಮನೆ ಮೇಲೆ ಕುಸಿದ ಗುಡ್ಡ: ನಾಲ್ವರು ಸಾವು | JANATA NEWS
ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದ ಪರಿಣಾಮ ನಾಲ್ಕು ಜನ ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಮುಟ್ಟಳ್ಳಿಯಲ್ಲಿ ನಡೆದಿದೆ.
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಕೆಲ ಪ್ರದೇಶಗಳು ಸಂಪೂರ್ಣ ಮುಳುಗಡೆಯಾಗಿದ್ದು, ಹಲವೆಡೆ ಗುಡ್ಡ ಕುಸಿತಗೊಂಡಿದೆ.
ಜಿಲ್ಲೆಯ ಭಟ್ಕಳ ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿನ ಮನೆ ಕುಸಿದಿದೆ. ಮನೆಯಲ್ಲಿದ್ದ ಲಕ್ಷ್ಮಿ ನಾರಾಯಣ ನಾಯ್ಕ (48), ಅವರ ಪುತ್ರಿ ಲಕ್ಷ್ಮಿ ನಾಯ್ಕ (33), ಪುತ್ರ ಅನಂತ ನಾರಾಯಣ ನಾಯ್ಕ (32) ಹಾಗೂ ಸಂಬಂಧಿ ಪ್ರವೀಣ ಬಾಲಕೃಷ್ಣ ನಾಯ್ಕ (20) ಮೃತ ದುರ್ದೈವಿಗಳು.
ಗುಡ್ಡದ ಮೇಲಿನಿಂದ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ .ಇದರಿಂದ ಮನೆಯಲ್ಲಿದ್ದ ನಾಲ್ಕು ಜನ ಮಣ್ಣಿನ ಅಡಿಯಲ್ಲಿ ಸಿಲುಕೊಂಡಿದ್ದರು. ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಸ್ಥಳೀಯರ ಸಹಾಯದಿಂದ ಮಣ್ಣಿನ ಅಡಿಯಲ್ಲಿ ಸಿಲುಕೊಂಡಿದ್ದ ನಾಲ್ಕು ಜನರ ಮೃತದೇಹವನ್ನು ಹೊರತೆಗೆದಿದ್ದಾರೆ