Sun,May19,2024
ಕನ್ನಡ / English

ಸಿದ್ದರಾಮಯ್ಯ ನೇತೃತ್ವದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ: ಡಿ.ಕೆ. ಶಿವಕುಮಾರ್ | JANATA NEWS

03 Aug 2022
3129

ದಾವಣಗೆರೆ : ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮ ಅಮೃತ ಮಹೋತ್ಸವದಲ್ಲಿ ಪಾಲ್ಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವೇಣುಗೋಪಾಲ್, ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಜೊತೆಗೆ ರಾಜ್ಯದ ಹಲವೆಡೆಯಿಂದ ಸಿದ್ದರಾಮಯ್ಯ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗಿಯಾದ ಡಿಕೆ ಶಿವಕುಮಾರ್ ವೇದಿಕೆ ಮೇಲೆ ಸಿದ್ದರಾಮಯ್ಯರನ್ನು ಸನ್ಮಾನಿಸಿದರು. ರೇಷ್ಮೆ ಸಾಲು ಹಾಕಿ, ಇಂದಿರಾ ಗಾಂಧಿ ಅವರ ಬಗೆಗಿನ ಪುಸ್ತಕ ಕೊಟ್ಟು ಹುಟ್ಟುಹಬ್ಬದ ಶುಭಾಶಯ ಕೋರಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ತುಂಬಿದೆ. ಇದೇ ವೇಳೆ ದೇಶದ 75ನೇ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸ್ತಿದ್ದೇವೆ. ದೇಶಕ್ಕೂ ಸಂಭ್ರಮ, ಕಾಂಗ್ರೆಸ್‌ಗೂ ಸಂಭ್ರಮ. ಬಸವ ಜಯಂತಿ ದಿನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ಸಿದ್ದರಾಮೋತ್ಸವ ಕಾರ್ಯಕ್ರಮ ಬಗ್ಗೆ ಹೇಳುತ್ತಿದ್ದಂತೆ ಸಂಭ್ರಮಪಟ್ಟಿದ್ದೆ. ಐತಿಹಾಸಿಕ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ರಾಹುಲ್‌ಗೆ ಧನ್ಯವಾದಗಳು. ನೀವೆಲ್ಲರೂ ವಿಧಾನಸೌಧದ 3ನೇ ಮಹಡಿಯಲ್ಲಿ ಓಡಾಡಬೇಕಿದೆ. ಇದಕ್ಕೆ ಬಿಜೆಪಿ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕಿದೆ.

ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ. ಸೋನಿಯಾ ಗಾಂಧಿ ಅವರ ಕೈ ಬಲಪಡಿಸಿ, ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡೋಣ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದರಿಸೋಣ. ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಿಸಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಲು ನಾವೆಲ್ಲರೂ ಇಂದು ಸಂಕಲ್ಪ ಮಾಡೋಣ ಎಂದರು.

ಸಿದ್ದರಾಮಯ್ಯನವರ ಮುಂದಾಳತ್ವದಲ್ಲಿ ನಾವುಗಳು ಮುಂದುವರಿಯೋಣ ಹಾಗೂ ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸೋಣ ಎಂದು ಹೇಳಿದ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಆಗಮಿಸಿದವರಲ್ಲಿ ಮನವಿ ಮಾಡಿದರು.

RELATED TOPICS:
English summary :Election under Siddaramaiah-led collective leadership: D.K. Shivakumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...