ನಿಂತ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದ ಲಾರಿ, 10 ವರ್ಷದ ಬಾಲಕ ದುರ್ಮರಣ | JANATA NEWS

ಬೆಳಗಾವಿ : ಶಾಲಾ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 10 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ನಗರದ ಕ್ಯಾಂಪ್ ಪ್ರದೇಶದಲ್ಲಿರುವ ವೆಲಕಮ್ ಹೋಟೆಲ್ ಬಳಿ ಸ್ಕೂಟಿ ಮೇಲೆ ಶಾಲೆಗೆ ಹೋಗಲು ರಸ್ತೆ ಬದಿಗೆ ನಿಂತಿದ್ದವರ ಮೇಲೆ ಲಾರಿ ಹರಿದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪರಿಣಾಮ, ಅರಹಾನ್ ಬೇಪಾರಿ (10) ಎಂಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತಪಟ್ಟ ಬಾಲಕನ ಸಹೋದರಿ ಅತೀಕಾ ಬೇಪಾರಿ ಹಾಗೂ ಆಯುಷ್ಯ ಎಂಬವವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಇದರಿಂದ ರೊಚ್ಚಿಗೆದ್ದ ಜನ ಲಾರಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಲಾರಿ ಜಖಂಗೊಂಡಿದೆ. ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.