ಲಾರಿ ಹಾಗೂ 2 ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ | JANATA NEWS
ಶಿವಮೊಗ್ಗ : ಲಾರಿ ಹಾಗೂ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪದಲ್ಲಿ ನಡೆದಿದೆ.
ಉಳ್ಳೂರು ಸಮೀಪದ ತಿರುವಿನಲ್ಲಿ ಟಿಪ್ಪರ್ ಲಾರಿ ಹಾಗೂ ಪಲ್ಸರ್ ಮತ್ತು ಬುಲೆಟ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಒಬ್ಬ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ.
ಶಿವಮೊಗ್ಗದಿಂದ ಸಾಗರಕ್ಕೆ ಬರುತ್ತಿದ್ದ ಲಾರಿ, ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬುಲೆಟ್ ಹಾಗೂ ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ಬುಲೆಟ್ ನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಇಬ್ಬರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Collision between lorry and 2 bikes: One killed on the spot, two injured