Thu,Sep29,2022
ಕನ್ನಡ / English

ನೆರೆ ಪರಿಹಾರದಲ್ಲಿ ಯಾವುದೇ ತಾರತಮ್ಯವಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ | JANATA NEWS

08 Aug 2022
754

ಬೆಂಗಳೂರು : ಪ್ರಕೃತಿ ವಿಕೋಪ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಅಗತ್ಯಕ್ಕೆ ಅನುಗುಣವಾಗಿ ಕಾಲ ಕಾಲಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಪರಿಹಾರ ವಿಚಾರವಾಗಿ ಟ್ವೀಟ್ ಮಾಡಿದ್ದ ಮಾಜಿ ಸಚಿವ ಎಂಬಿ ಪಾಟೀಲ್, ವಿಜಯಪುರ ಜಿಲ್ಲೆಯ ಪಾಲಿಗೆ ಸರ್ಕಾರ ಇದ್ದೂ ಸತ್ತಂತಾಗಿದ್ದು ನಮ್ಮ ಜಿಲ್ಲೆ ಅನಾಥವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಅಭಿವೃದ್ಧಿಯ ವಿಷಯದಲ್ಲೂ ಶೂನ್ಯ ಕೊಡುಗೆ! ಜಿಲ್ಲೆಯ ಪಾಲಿಗೆ ಸರ್ಕಾರ ಜೀವಂತವಿದ್ದರೆ ಇದಕ್ಕೆ ಏನಾದರೂ ಉತ್ತರವಿದೆಯೇ? ಎಂದು ಪ್ರಶ್ನಿಸಿದ್ದರು.

ಅಲ್ಲದೆ, ಮುಖ್ಯಮಂತ್ರಿಗಳಿಗೆ ಈ ಭಾಗದ ಮಂತ್ರಿಗಳಿಗೆ ಕಿಂಚಿತ್ತು ಮಾನ, ಮರ್ಯಾದೆ ಇದ್ದರೆ, ತಕ್ಷಣ ಜಿಲ್ಲಾಧಿಕಾರಿಗಳಿಂದ ಮಳೆಯಿಂದ ಹಾನಿಯಾಗಿರುವ ಮಾಹಿತಿ ಪಡೆದು, ವಿಜಯಪುರ ಜಿಲ್ಲೆಗೂ ತುರ್ತು ಪರಿಹಾರ ಬಿಡುಗಡೆ ಮಾಡಿ ತಮ್ಮ ಗೌರವ ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ ಸಂತ್ರಸ್ಥರೊಂದಿಗೆ ನಾನೇ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಪ್ರಕೃತಿ ವಿಕೋಪದ ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನವನ್ನು ಆಧರಿಸಿ ಹಣ ಬಿಡುಗಡೆ ಮಾಡಲಾಗುತ್ತದೆ. ಇದೇ ಆಗಸ್ಟ್ 2 ರ ಮಾಹಿತಿಯಂತೆ ವಿಜಯಪುರ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ 28.5 ಕೋಟಿ ರೂ. ಅನುದಾನ ಲಭ್ಯವಿದೆ. ಇತರ 21 ಜಿಲ್ಲೆಗಳಲ್ಲಿ ವಿಜಯಪುರ ಜಿಲ್ಲೆಗಿಂತ ಕಡಿಮೆ ಮೊತ್ತ ಲಭ್ಯವಿದೆ ಎಂಬುದು ಗಮನಿಸಬೇಕಾದ ಅಂಶ. ಪ್ರಕೃತಿ ವಿಕೋಪದ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಅಗತ್ಯಕ್ಕೆ ಅನುಗುಣವಾಗಿ ಕಾಲ ಕಾಲಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದಿದ್ದಾರೆ.

ಪ್ರಕೃತಿ ವಿಕೋಪದ ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನವನ್ನು ಆಧರಿಸಿ ಹಣ ಬಿಡುಗಡೆ ಮಾಡಲಾಗುತ್ತದೆ. ಇದೇ ಆಗಸ್ಟ್ 2 ರ ಮಾಹಿತಿಯಂತೆ ಬೀದರ್ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ 20.45 ಕೋಟಿ ರೂ., ಕಲಬುರ್ಗಿ ಜಿಲ್ಲಾಧಿಕಾರಿಗಳ ಬಳಿ 42.07 ಕೋಟಿ ರೂ, ಯಾದಗಿರಿ ಜಿಲ್ಲಾಧಿಕಾರಿಗಳ ಬಳಿ 25.14 ಕೋಟಿ ರೂ. ಅನುದಾನ ಲಭ್ಯವಿದೆ. ಪ್ರಕೃತಿ ವಿಕೋಪದ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಅಗತ್ಯಕ್ಕೆ ಅನುಗುಣವಾಗಿ ಕಾಲ ಕಾಲಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

RELATED TOPICS:
English summary :No Discrimination in Neighbor Relief: Basavaraja Bommai Clarification

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...