Thu,Sep29,2022
ಕನ್ನಡ / English

ಕಾಂಗ್ರೆಸ್‌ನವರೇ, ನಿಮಗೆ ಒಳ್ಳೆಯದು ಮಾಡೋಕೆ ಆಗಿಲ್ಲ ಅಂದರೆ ಸಮಾಜದಲ್ಲಿ ಗೊಂದಲ ಸೃಷ್ಟಿಸಬೇಡಿ | JANATA NEWS

09 Aug 2022
715

ಬೆಂಗಳೂರು : ಬಿಜೆಪಿ ಪಕ್ಷ ಮತ್ತು ನಮ್ಮ ಸರ್ಕಾರ ಜನರ ಪರವಾಗಿರುವ ಸರ್ಕಾರವಾಗಿದೆ ಹೊರತು ಇದು ಯಾವುದೋ ಕಾಂಗ್ರೆಸ್, ಜೆಡಿಎಸ್ ನಂತೆ ಖಾಸಗಿ ಕಂಪನಿಯಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ನಾವು ಚೆನ್ನಾಗಿ ಕೆಲಸ ಮಾಡ್ತಿದ್ದೇವೆ. ನಮ್ಮಲ್ಲಿ ಯಾರು ಏನು ಬೇಕಾದರೂ ಆಗಬಹುದು. ಆದರೆ ಇವೆರಡರಲ್ಲಿ ಕುಟುಂಬಕ್ಕಷ್ಟೇ ಅಧಿಕಾರ. ಕಾಂಗ್ರೆಸ್​ನಲ್ಲಿ ಸೋನಿಯಾ ಗಾಂಧಿ ಕಂಪನಿ, ರಾಹುಲ್ ಗಾಂಧಿ ಕಂಪನಿ, ಪ್ರಿಯಾಂಕಾ ಗಾಂಧಿ ಕಂಪನಿ ಇರುವುದು. ರಾಮನಗರದಲ್ಲಿ ಕುಮಾರಸ್ವಾಮಿ ಕಂಪನಿ ಇದೆ. ಈ ಸಮಾಜದಲ್ಲಿ ಯಾವುದಾದರೂ ಅರ್ಥ ಇಲ್ಲದೆ ಇರೋ ಪಕ್ಷಗಳು ಅಂದರೆ ಅದು ಇವುಗಳೇ. ಬರುವ ಚುನಾವಣೆಯಲ್ಲಿ ರಾಮನಗರದಲ್ಲಿ ನಾವು ಮೆಜಾರಿಟಿ ತೆಗೆದುಕೊಳ್ತೇವೆ. ಅಲ್ಲಿ ಎಲ್ಲಾ ತರ ಇದ್ದಾರೆ, ಬಂಡೆ ಜೊತೆ ಕುಮಾರಸ್ವಾಮಿನೂ ಇದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿಯವರು ನಾಟಕ ಮಾಡ್ತಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಯಾರಿಗಾದರೂ ಚೆನ್ನಾಗಿ ನಾಟಕ ಮಾಡಲು ಬರುತ್ತದೆ ಅಂದರೆ ಅದು ಸಿದ್ದರಾಮಯ್ಯನವರಿಗೆ ಮಾತ್ರ. ನಾಟಕದ ಅನುಭವವನ್ನು ಅವರು ಬೇರೆಯವರಿಗೆ ಹೇಳ್ತಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಮಾಡೋದು ಪ್ರತಿಯೊಬ್ಬರ ಕರ್ತವ್ಯ. ಅದರಲ್ಲಿ ತಪ್ಪು ಕಂಡು ಹಿಡಿಯೋದು, ದೋಷ ಎತ್ತಿ ಹಿಡಿಯೋದು ಸರಿಯಲ್ಲ ಎಂದರಲ್ಲದೇ, ಕಾಂಗ್ರೆಸ್‌ನವರೇ, ನಿಮಗೆ ಒಳ್ಳೆಯದು ಮಾಡೋಕೆ ಆಗಿಲ್ಲ ಅಂದರೆ ಸಮಾಜದಲ್ಲಿ ಗೊಂದಲ ಸೃಷ್ಟಿಸಬೇಡಿ. ಒಳ್ಳೆಯದು ಮಾಡಲು ಯೋಗ್ಯತೆ ಇಲ್ಲ ಅಂದರೆ ಕೆಟ್ಟದ್ದನ್ನು ಹೇಳಬೇಡಿ. ನಿಮ್ಮ ಭಕ್ತಿ ದೇಶದ ಮೇಲೆ ಇದ್ದರೆ ತಮ್ಮ ಕರ್ತವ್ಯದ ಮೂಲಕ ಮಾಡಿ. ಅದು ಬಿಟ್ಟು ಇಂತಹ ಡೋಂಗಿ ಹೇಳಿಕೆಗಳನ್ನು ನಿಲ್ಲಿಸಿ ಎಂದು ವಾಗ್ದಾಳಿ ನಡೆಸಿದರು.‌

ಅಧಿವೇಶನ ಕರೆಯಲು ಸರ್ಕಾರ ಹಿಂದೇಟು ಹಾಕುವ ಬಗ್ಗೆ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಎಲ್ಲಿದ್ಯಪ್ಪಾ ಕುಮಾರಸ್ವಾಮಿ..? ಅಧಿವೇಶನ ನಡೆದರೆ ಕುಮಾರಸ್ವಾಮಿ ಸದನಕ್ಕೆ ಬರುವುದಿಲ್ಲ. ಎಲ್ಲಿದ್ದಿ ಕುಮಾರಸ್ವಾಮಿ ಎಂದು ಅವರನ್ನು ಹುಡುಕಬೇಕು. ಸದನ ಕರೀರಿ ಅನ್ನೋದು, ಆಮೇಲೆ ಬರದೆ ಇರೋದು. ಸಿದ್ದರಾಮಯ್ಯ ಮಾತಿನಂತೆ ಇವರೂ ಮಾತಾಡ್ತಿರೋದು. ಬಾಯಿಗೆ ಬಂದಂತೆ ದಿಕ್ಕು ಇಲ್ಲದಂತೆ ಗುಂಡು ಹೊಡೆಯುತ್ತಿದ್ದಾರೆ ಎಂದು ಕಿಡಿಕಾರಿದರು.

RELATED TOPICS:
English summary :BJP party is not a private company like Congress and JDS parties

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...