ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್ ಪರೀಕ್ಷೆ ಬರೆಯುತ್ತಿದ್ದವನ ಬಂಧನ | JANATA NEWS

ಬೆಳಗಾವಿ : ಕೆಪಿಟಿಸಿಎಲ್‌ನ ಕಿರಿಯ ಸಹಾಯಕರ ಪರೀಕ್ಷೆಯಲ್ಲಿ ಸ್ಮಾರ್ಟ್ ವಾಚ್ ಬಳಸಿ ಅಕ್ರಮ ನಡೆಸಿರುವ ಅಭ್ಯರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಪಿಟಿಸಿಎಲ್ ಜ್ಯೂನಿಯರ್ ಅಸಿಸ್ಟೆಂಟ್ ಲಿಖಿತ ಪರೀಕ್ಷೆ ವೇಳೆ ನಕಲು ಮಾಡಲು ಸ್ಮಾರ್ಟ್ ವಾಚ್ ಬಳಸಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಗೋಕಾಕ್ ಪೊಲೀಸರು ಬಂಧಿಸಿದ್ದಾರೆ.
ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಸಿದ್ದಪ್ಪ ಮದಿಹಳ್ಳಿ(20) ಬಂಧಿತ ಅಭ್ಯರ್ಥಿ.
ಅಭ್ಯರ್ಥಿ ಸಿದ್ದಪ್ಪ, ಸ್ಮಾರ್ಟ್ ವಾಚ್ ಮೂಲಕ ಪ್ರಶ್ನೆಪತ್ರಿಕೆಯ ಫೋಟೋ ತೆಗೆದು ಕಳುಹಿಸುತ್ತಿದ್ದ. ಬಳಿಕ ಅದೇ ಸ್ಮಾರ್ಟ್ ವಾಚ್ ನೋಡಿಕೊಂಡು ಪರೀಕ್ಷೆ ಬರೆಯುತ್ತಿದ್ದ. ಇದು ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಅಭ್ಯರ್ಥಿಯ ಎಸಗಿರುವ ಕೃತ್ಯಗಳು ಸೆರೆಯಾಗಿವೆ. ಈ ಕುರಿತು ಪರೀಕ್ಷಾ ಕೇಂದ್ರದ ಅಧಿಕಾರಿಗಳು ಗೋಕಾಕ ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದರು.