ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ಧ್ವಜಾರೋಹಣ | JANATA NEWS
ಬೆಂಗಳೂರು : ಚಾಮರಾಜಪೇಟೆ ಮೈದಾನದಲ್ಲಿ ಸೋಮವಾರ ಪೊಲೀಸ್ ಬಂದೋಬಸ್ತ್ನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅದ್ದೂರಿಯಾಗಿ, ಅತ್ಯಂತ ಶಾಂತಿಯುತವಾಗಿ ನೆರವೇರಿತು.
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಧ್ವಜಾರೋಹಣ ಮಾಡಲಾಗಿದೆ. ಚಾಮರಾಜಪೇಟೆ ಮೈದಾನದಲ್ಲಿ ಇಂದು ಬೆಳಿಗ್ಗೆ ಎಂಟು ಗಂಟೆಗೆ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿಲಾಯಿತು.
ಇದೇ ಪ್ರಥಮ ಬಾರಿಗೆ ಈ ಮೈದಾನದಲ್ಲಿ ಸರ್ಕಾರದಿಂದ ಆಯೋಜಿಸಿದ್ದ ಧ್ವಜಾರೋಹಣವನ್ನು ಉಪವಿಭಾಗಾಧಿಕಾರಿಗಳಾದ ಡಾ.ಎಂ. ಜಿ. ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು.
ನಿರೀಕ್ಷೆಗೂ ಮೀರಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಎಲ್ಲರಿಗೂ ಸಿಹಿ ವಿತರಿಸಲಾಯಿತು. ಶಾಲಾ ಮಕ್ಕಳು ನಡೆಸಿಕೊಟ್ಟ ದೇಶಭಕ್ತಿ ಗೀತೆ ಗಾಯನ, ನೃತ್ಯ ಕಾರ್ಯಕ್ರಮಗಳು ಮನಸೆಳೆದವು.