Thu,May09,2024
ಕನ್ನಡ / English

ಕಾಂಗ್ರೆಸ್ ಗೆಲ್ಲುತ್ತೆ ಅಂತ ಬಿಜೆಪಿ ಹತಾಶರಾಗಿ, ಸರ್ಕಾರವೇ ಹಣ ನೀಡಿ ನನ್ನ ವಿರುದ್ಧ ಪ್ರತಿಭಟನೆ ಮಾಡಿಸಿದೆ! | JANATA NEWS

18 Aug 2022
5600

ಮಡಿಕೇರಿ : ಸರ್ಕಾರವೇ ಹಣ ಕೊಟ್ಟು ಜನರನ್ನ ಕರೆಸಿ ನನ್ನ ವಿರುದ್ಧ ಪ್ರತಿಭಟನೆ ಮಾಡಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿದರು.

ನಾನು ಬಂದು ಮಳೆ ಹಾನಿಯಾದ ಪ್ರದೇಶಗಳನ್ನು ನೋಡ್ತೀನಿ ಅಂತ ಕಾರ್ಯಕರ್ತರನ್ನು ಬಿಟ್ಟು ಪ್ರತಿಭಟನೆ ಮಾಡಿಸಿದ್ದಾರೆ. ಈ ಬಾರಿ ಕೊಡಗಿನಲ್ಲಿ ಎರಡೂ ಕಡೆ ಕಾಂಗ್ರೆಸ್ ಗೆಲ್ಲುತ್ತೆ ಅಂತ ಬಿಜೆಪಿ ಹತಾಶರಾಗಿ ಹೀಗೆ ಪ್ರತಿಭಟನೆ ಮಾಡಿದ್ದಾರೆ ಎಂದರು.

ಈ ಬಾರಿ ಕೊಡಗಿನಲ್ಲಿ ಎರಡೂ ಕಡೆ ಕಾಂಗ್ರೆಸ್ ಗೆಲ್ಲುತ್ತೆ ಅಂತ ಬಿಜೆಪಿ ಹತಾಶರಾಗಿ ಹೀಗೆ ಪ್ರತಿಭಟನೆ ಮಾಡಿದ್ದಾರೆ. ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ? ನಾವು ಅಲ್ಲಿಂದಲೇ ಪ್ರತಿಭಟನೆ ಮಾಡಿಕೊಂಡು ಬಂದಿರೋದು. ನಾವು ಹೋರಾಟ ಮಾಡೋಕೆ‌ ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ. ನಮ್ಮ ಕಾರ್ಯಕರ್ತರು ಬೀದಿಗಿಳಿದ್ರೆ ಬಿಜೆಪಿಯವರಿಗೆ ಕೊಡಗಿನಲ್ಲೇ ತಿರುಗಾಡೋಕೆ ಆಗಲ್ಲ ಎಂದು ಸಿದ್ದರಾಮಯ್ಯ ಎಚ್ಚರಿಕೆ ರವಾನಿಸಿದರು.

ತಮ್ಮ ಭೇಟಿಯ ವೇಳೆ ಪ್ರತಿಭಟನೆ ನಡೆಸಲು ಬಿಜೆಪಿ ಕಾರ್ಯಕರ್ತರಿಗೆ ಸರ್ಕಾರವೇ ಹಣ ನೀಡಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ಈ ಎಲ್ಲಾ ಪ್ರತಿಭಟನೆಗಳು ಭ್ರಷ್ಟ ಮತ್ತು ಕಳಪೆ ಗುಣಮಟ್ಟದ ಪರಿಹಾರ ಕಾಮಗಾರಿಗಳನ್ನು ಮುಚ್ಚಿಹಾಕುವ ಯತ್ನವಾಗಿವೆ. ಟಿಪ್ಪು ಜಯಂತಿಯನ್ನು ಹಲವಾರು ವರ್ಷಗಳಿಂದ ಆಚರಿಸಲಾಗುತ್ತಿದ್ದು, ಸಮಸ್ಯೆಯ ನಂತರ ಹಲವು ಬಾರಿ ಕೊಡಗಿಗೆ ಭೇಟಿ ನೀಡಿದ್ದೇನೆ. ಆಗ ಎಲ್ಲಾ ಬಿಜೆಪಿ ಕಾರ್ಯಕರ್ತರು ಸತ್ತಿದ್ದರಾ? ಎಂದು ಪ್ರಶ್ನಿಸಿದರು.

ಚುನಾಯಿತ ಜನಪ್ರತಿನಿಧಿಗಳು ಗುತ್ತಿಗೆದಾರರೊಂದಿಗೆ ಸೇರಿ ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದ್ದಾರೆ. 'ಡಿಸಿ ಕಚೇರಿ ಪಕ್ಕದಲ್ಲಿರುವ ತಡೆಗೋಡೆಯ ಭ್ರಷ್ಟ ಕಾಮಗಾರಿಯನ್ನು ಪರಿಶೀಲಿಸದಂತೆ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲೆಯಲ್ಲಿ ನಡೆದಿರುವ ಭ್ರಷ್ಟ ಪರಿಹಾರ ಕಾಮಗಾರಿಗಳ ಕುರಿತು ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ನಡೆಸುತ್ತೇನೆ, ಮುಂಬರುವ ಚುನಾವಣೆಯಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದರು. 2018, 19, 20ರಲ್ಲಿ ಆದ ಮಳೆಯ ಹಾನಿಗೆ ಸರ್ಕಾರ ಇನ್ನೂ ಕೂಡ ಪರಿಹಾರ ನೀಡಿಲ್ಲ. ಸೇತುವೆ ತಡೆಗೋಡೆಗಳನ್ನು ತೀರಾ ಕಳಪೆಯಾಗಿ ಮಾಡಿದ್ದಾರೆ. ಅದಕ್ಕೆ ಅವೆಲ್ಲಾ ಹೀಗಾಗಿವೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

RELATED TOPICS:
English summary :The government has given money and protested against me

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...