ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ತಂದೆ, ಮಗಳು ಸೇರಿ ಸ್ಥಳದಲ್ಲೇ ಮೂವರ ಸಾವು | JANATA NEWS
ತುಮಕೂರು : ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಅಪಘಾತದ ರಭಸಕ್ಕೆ ಕಡವಿಗೆರೆ ಗ್ರಾಮದ ಚಾಲಕ ಅವಿನಾಶ (28), ಮಗಳು ಪ್ರಣಂತಿ (5) ಹಾಗೂ 4 ವರ್ಷದ ಸೌಮ್ಯ ಸಾವನ್ನಪ್ಪಿದ್ದಾರೆ. ಮುಂದೆ ಚಲಿಸುತ್ತಿದ್ದ ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದೆ. ಲಾರಿಗೆ ಸ್ವಿಫ್ಟ್ ಕಾರು ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಕಾರಿನಲ್ಲಿ ಸಂಬಂಧಿಕರ ಮನೆಗೆ ತೆರಳುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
English summary :A car collided with a moving lorry from behind, killing three people including a father and daughter on the spot