Thu,Sep29,2022
ಕನ್ನಡ / English

ಹಿಂದುಳಿದ ವರ್ಗಗಳ ಹಾಸ್ಟೆಲ್ ಸುಧಾರಣೆಗೆ ಹೆಚ್ಚುವರಿ 250 ಕೋಟಿ ಮಂಜೂರಾತಿ: ಸಿಎಂ ಬೊಮ್ಮಾಯಿ ಘೋಷಣೆ | JANATA NEWS

20 Aug 2022
552

ಬೆಂಗಳೂರು : ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸ್ಥಿತಿಗತಿಗಳ ಸುಧಾರಣೆ ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಒಟ್ಟು 250 ಕೋಟಿ ರೂ ಮಂಜೂರು ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. ಹಿಂದುಳಿದ ವರ್ಗಗಳ ಹಾಸ್ಟೆಲ್ ಸುಧಾರಣೆಗೆ 150 ಕೋಟಿ ರೂ., ಬೇರೆ ಸೌಲಭ್ಯಕ್ಕಾಗಿ 100 ಕೋಟಿ ರೂ. ಸೇರಿ 250 ಕೋಟಿ ರೂಪಾಯಿ ಬಿಡುಗಡೆಗೆ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದರು. ಶೀಘ್ರದಲೇ 250 ಕೋಟಿ ರೂ. ಹೆಚ್ಚುವರಿ ಅನುದಾನಕ್ಕೆ ಮಂಜೂರಾತಿ ನೀಡಲಾಗುವುದು ಎಂದರು.

ರಾಜ್ಯ ಸರ್ಕಾರದ ಎಲ್ಲ ವಿದ್ಯಾರ್ಥಿನಿಲಯಗಳ ಸಾಮರ್ಥ್ಯವನ್ನು ಶೇ. 25 ರಷ್ಟು ಹೆಚ್ಚಿಸಲು ಅನುದಾನವನ್ನು ನೀಡಲಾಗಿದೆ. ರಾಜ್ಯದ ಒಟ್ಟು 2439 ಹಾಸ್ಟೆಲ್‍ಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ವಿದ್ಯಾರ್ಥಿ ವೇತನದಲ್ಲಿ ತಲಾ 150 ರೂ.ಗಳನ್ನು ಹೆಚ್ಚಿಸಲಾಗಿದೆ. 195 ವಿದ್ಯಾರ್ಥಿನಿಲಯ ಕಟ್ಟಡಗಳು ನಿರ್ಮಾಣದ ವಿವಿಧ ಹಂತದಲ್ಲಿವೆ. ಕನಕದಾಸರ ಹೆಸರಿನಲ್ಲಿ 50 ಹೊಸ ಹಾಸ್ಟೆಲ್‍ಗಳನ್ನು ನಿರ್ಮಿಸಲಾಗುತ್ತಿದೆ.

ರಾಜ್ಯದ 5 ಶೈಕ್ಷಣಿಕ ಕೇಂದ್ರಗಳಲ್ಲಿ 1000 ಮಕ್ಕಳಿಗೆ ಬಹುಮಹಡಿ ವಸತಿ ಸಮುಚ್ಛಯಗಳನ್ನು ನಿರ್ಮಿಸಲಾಗುತ್ತಿದೆ. ಈ ಯೋಜನೆಯನ್ನು 5000 ಮಕ್ಕಳ ಸಾಮರ್ಥ್ಯಕ್ಕೇರಿಸುವ ಗುರಿ ಇದ್ದು, ಹಣವನ್ನು ಒದಗಿಸಲಾಗಿದೆ. ದೇವರಾಜ ಅರಸು ಅವರ ಹೆಸರಿನಲ್ಲಿ ಪಿಹೆಚ್‍ಡಿ ಮಾಡುವ ವಿದ್ಯಾರ್ಥಿಗಳಿಗೆ ಒಟ್ಟು 4 ಕೋಟಿ ಅನುದಾನ ಬಿಡುಗಡೆ ಮಾಡಿ ಆದೇಶ ನೀಡಲಾಗಿದೆ. ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ 10 ಕೋಟಿ ಅನುದಾನ ಹೆಚ್ಚಿಗೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.

RELATED TOPICS:
English summary :Additional Rs 250 crore sanctioned for backward class hostel improvement: CM Bommai announces

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...