Thu,Sep29,2022
ಕನ್ನಡ / English

ಮಧ್ಯಾಹ್ನ ನಾನ್‌ವೆಜ್‌ ತಿಂದು ಸಂಜೆ ದೇವಸ್ಥಾನಕ್ಕೆ ಹೋದ್ರೆ ತಪ್ಪೇನು? | JANATA NEWS

21 Aug 2022
587

ಚಿಕ್ಕಬಳ್ಳಾಪುರ : ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಮತ್ತೆ ಮಾಂಸದೂಟದ ಆರೋಪ ಕೇಳಿಬಂದಿದೆ. ಸಿದ್ದರಾಮಯ್ಯ ಮಾಂಸ ತಿಂದು ದೇಗುಲಕ್ಕೆ ಹೋಗಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರೆ ಹಾನಿ ವೀಕ್ಷಣೆಗೆ ಮೊನ್ನೆ ಮೊನ್ನೆಯಷ್ಟೇ ಕೊಡಗಿಗೆ ಭೇಟಿ ನೀಡಿದ್ದರು. ಆದರೆ ಸಿದ್ದರಾಮಯ್ಯರ ಕೊಡಗಿನ ಭೇಟಿ ಹಲವು ವಿದ್ಯಮಾನಗಳಿಗೆ ಸಾಕ್ಷಿಯಾಗ್ತಿದೆ. ಸಿದ್ದರಾಮಯ್ಯರ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಬಿಜೆಪಿ-ಕಾಂಗ್ರೆಸ್​ ನಡುವೆ ವಾಕ್ಸಮರಕ್ಕೂ ಕಾರಣವಾಗಿದೆ. ಇದರ ನಡುವೆ ಈಗ ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ತೆರಳಿದ್ದರು ಅನ್ನೋ ಬಗ್ಗೆ ಚರ್ಚೆ ನಡೆಯುತ್ತಿದೆ.

ಕೊಡಗಿಗೆ ಸಿದ್ದರಾಮಯ್ಯ ಭೇಟಿ ಕೊಟ್ಟಿದ್ದ ವೇಳೆ ಹಿಂದೂಗಳ ಭಾವನೆಗೆ ಧಕ್ಕೆ ಆಯ್ತಾ ಅನ್ನೋ ಪ್ರಶ್ನೆ ಮೂಡಿದೆ. ಮಾಂಸಾಹಾರ ತಿಂದು ಹೋದ್ರೆ ತಪ್ಪೇನು ಅಂತಾ ಸಿದ್ದರಾಮಯ್ಯರೇ ಪ್ರಶ್ನೆ ಮಾಡಿದ್ದಾರೆ.

ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಸಿದ್ದರಾಮಯ್ಯ ಮಾಂಸದೂಟ ಸೇವಿಸಿ ದೇಗುಲಕ್ಕೆ ತೆರಳಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಈಗ ಮತ್ತೊಮ್ಮೆ ಅಂತಹ ಚರ್ಚೆ ಶುರುವಾಗಿದೆ. ಅದಕ್ಕೆ ಕಾರಣ ಕೊಡಗಿನ ಭೇಟಿ ವೇಳೆಯೂ ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇಗುಲಕ್ಕೆ ತೆರಳಿದ್ದರು ಎನ್ನಲಾಗಿದೆ. ಫೋಟೋ ವೈರಲ್ ಆಗಿದೆ.

janata



ಮಡಿಕೇರಿಯ ಸರ್ಕ್ಯೂಟ್ ಹೌಸ್‌ನಲ್ಲಿ ಸಿದ್ದರಾಮಯ್ಯ ನಾಟಿಕೋಳಿ ಸಾರು ಸೇವಿಸಿದ್ದರು. ಊಟದ ಬಳಿಕ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಈಗ ಸಿದ್ದರಾಮಯ್ಯ ಊಟ ಮಾಡಿದ ಫೋಟೋ, ದೇವಸ್ಥಾನಕ್ಕೆ ಹೋದ ವಿಡಿಯೋ ವೈರಲ್ ಆಗಿದೆ. ಮಾಂಸಾಹಾರ ಸೇವಿಸಿ ದೇಗುಲಕ್ಕೆ ಹೋಗಿದ್ರಿಂದ ಹಿಂದೂಗಳ ಭಾವನೆಗೆ ಧಕ್ಕೆ ಆಗಿದೆ ಎನ್ನಲಾಗಿದೆ.

ಮಾಂಸಾಹಾರ ಸೇವಿಸಿ ಕೊಡಗಿನ ದೇವಸ್ಥಾನಕ್ಕೆ ಭೇಟಿ ನೀಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಊಟ ಮಾಡಿದ್ದು ಸುದರ್ಶನ್ ಗೆಸ್ಟ್ ಹೌಸ್‌ನಲ್ಲಿ. ಸಾಯಂಕಾಲ ಹೋಗುವಾಗ ದೇವಾಲಯಕ್ಕೆ ಹೋಗಿದ್ದೇನೆ. ದೇವರು ಇಂತಹದ್ದೆ ತಿನ್ನು ಅಂತ ಹೇಳಿದ್ದಾರಾ? ಬಿಜೆಪಿಯವರಿಗೆ ಮೊಸರಲ್ಲಿ ಕಲ್ಲು ಹುಡುಕಿ ಬೆಂಕಿ ಹಾಕುವುದೇ ಕೆಲಸ ಎಂದು ತಿರುಗೇಟು ನೀಡಿದರು.

RELATED TOPICS:
English summary :Whats wrong with eating non-veg in the afternoon and going to the temple in the evening?

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...