Sat,Apr27,2024
ಕನ್ನಡ / English

ರಾಜ್ಯ ಸರ್ಕಾರದಲ್ಲಿ ಸಿಎಂ, ಸಚಿವರು, ಶಾಸಕರಿಂದ 40% ಕಮಿಷನ್ ಗೆ ಬೇಡಿಕೆ: ಕೆಂಪಣ್ಣ | JANATA NEWS

24 Aug 2022
2914

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಮತ್ತೊಮ್ಮೆ 40% ಕಮಿಷನ್ ಆರೋಪ ಗುತ್ತಿಗೆದಾರರಿಂದ ಕೇಳಿಬರುತ್ತಿದೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸರ್ಕಾರದ ಸಂಪೂರ್ಣ ವ್ಯವಸ್ಥೆಯೇ ಭ್ರಷ್ಟಾಚಾರದಲ್ಲಿ ಮುಳುಗಿದೆ.

ಇಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯಿಂದ ಹಿಡಿದು ಸಚಿವರುಗಳು, ಶಾಸಕರು ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಅಷ್ಟೇ ಅಲ್ಲ ಈ ಕುರಿತು ಪ್ರಧಾನಿ ಅವರಿಗೆ ಪತ್ರ ಬರೆಯಲು ಗುತ್ತಿಗೆದಾರ ಕೆಂಪಣ್ಣ ಟೀಂ ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಗುತ್ತಿಗೆದಾರರ ಸಂಘ ನಿರ್ಧರಿಸಿದ್ದು, ರಾಜ್ಯ ಸರ್ಕಾರಕ್ಕೆ ಕಮಿಷನ್​ ಕಂಟಕ ಎದುರಾಗಿದೆ.

ಸರ್ಕಾರದ ಸಚಿವರು, ಶಾಸಕರು ಲಂಚ, ಭ್ರಷ್ಟಾಚಾರದಲ್ಲಿ ನಂಬರ್ 1, 2 ಸ್ಥಾನದಲ್ಲಿದ್ದಾರೆ. ಗುತ್ತಿಗೆದಾರರಿಂದ ಕಾಮಗಾರಿ ಹಣದಲ್ಲಿ ಶೇಕಡಾ 40ರಷ್ಟು ಲಂಚ ಪಡೆಯುತ್ತಾರೆ. ಅವರಿಗೆ ಇಷ್ಟೊಂದು ಲಂಚ ಹೋದರೆ ಉಳಿದ ಹಣದಲ್ಲಿ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಲು ಹೇಗೆ ಸಾಧ್ಯ, ಗುತ್ತಿಗೆದಾರರು ಜನಪ್ರತಿನಿಧಿಗಳ ಕಿರುಕುಳದಿಂದ ನಲುಗಿ ಹೋಗುತ್ತಿದ್ದಾರೆ ಎಂದು ಕೆಂಪಣ್ಣ ಆರೋಪಿಸಿದ್ದಾರೆ.

ಗುತ್ತಿಗೆದಾರರು ತಾವು ನಡೆಸಿದ ಕಾಮಗಾರಿಗಳ ಬಿಲ್ ಗಳನ್ನು ಕ್ಲೀಯರ್ ಮಾಡಿಸಿಕೊಳ್ಳಲು ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಮತ್ತಯ ಮಧ್ಯವರ್ತಿಗಳಿಗೆ ಶೇಕಡಾ 40 ರಷ್ಟು ಲಂಚ ನೀಡುತ್ತಿರುವುದು ನಿಜ ಎಂದು ಹೇಳಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಬುಧವಾರದಂದು ಸಂಘದ ಸುಮಾರು 30 ಪದಾಧಿಕಾರಿಗಳೊಂದಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿಮಾಡಿ ಮಾತುಕತೆ ನಡೆಸಿದರು.

RELATED TOPICS:
English summary :Demand for 40% commission from CM, Ministers, MLAs in state government: Kempanna

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...