ತುಮಕೂರಿನಲ್ಲಿ ಭೀಕರ ಅಪಘಾತ: ಸಂತಾಪ ಸೂಚಿಸಿ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಪ್ರಧಾನಿ | JANATA NEWS
ತುಮಕೂರು : ತುಮಕೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ 50000 ರೂಪಾಯಿಗಳನ್ನು ಘೋಷಿಸಿದ್ದಾರೆ.
'ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ ಘಟನೆ. ಅಪಘಾತದಲ್ಲಿ ಜೀವ ಕಳೆದು ಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ದೇವರದಲ್ಲಿ ಪ್ರಾರ್ಥಿಸುವೆ. ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು' ಎಂದು ಪ್ರಧಾನಿ ಅವರು ಟ್ವೀಟ್ ಮಾಡಿದ್ದಾರೆ.