Tue,Sep26,2023
ಕನ್ನಡ / English

ಲೈಂಗಿಕ ಕಿರುಕುಳ ಆರೋಪ: ಮುರುಘಾಮಠದ ಶ್ರೀ ವಿರುದ್ಧ ಪೋಕ್ಸೋ ಕೇಸ್ | JANATA NEWS

27 Aug 2022
2650

ಚಿತ್ರದುರ್ಗ : ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪದ ಮೇಲೆ, ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯವರು ಲೈಂಗಿಕವಾಗಿ ತೊಂದರೆ ನೀಡುತ್ತಿದ್ದಾರೆ. ಇದು ಬಹಳಷ್ಟು ದಿನಗಳಿಂದ ನಡೆಯುತ್ತಿದ್ದು, ಅಲ್ಲಿ ನ್ಯಾಯ ಸಿಗುವ ವಿಶ್ವಾಸ ಇಲ್ಲ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಗೆ ಮೊರೆ ಹೋಗಿದ್ದಾರೆ.

ಸಂಸ್ಥೆ ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿತು. ಮಕ್ಕಳ ಹೇಳಿಕೆಯಲ್ಲಿ ಸತ್ಯ ಇರುವುದರಿಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿ ಆದೇಶ ನೀಡಿತು.

ಈ ಪ್ರಕರಣದಲ್ಲಿ ಮುರುಘಾ ಶರಣರು ಮೊದಲ ಆರೋಪಿಯಾಗಿದ್ದರೇ, ವಾರ್ಡನ್ ಎರಡನೇ ಆರೋಪಿಯನ್ನಾಗಿ ಮಾಡಲಾಗಿದೆ. ಬಸವಾದಿತ್ಯ ಮೂರನೇ ಆರೋಪಿಯಾಗಿದ್ದಾರೆ. ಇದಲ್ಲದೇ ಮಠದ ಭಕ್ತರೆನ್ನಲಾದಂತ ಮೈಸೂರಿನ ಪರಮಶಿವಯ್ಯ ಹಾಗೂ ವಕೀಲ ಗಂಗಾಧರಯ್ಯ ನಾಲ್ಕು, ಐದನೇ ಆರೋಪಿಗಳಾಗಿದ್ದಾರೆ.

ಅಂದಹಾಗೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ ಚಂದ್ರಕುಮಾರ್ ನೀಡಿದಂತ ದೂರಿನ ಮೇರೆಗೆ, ಮೈಸೂರಿನ ನಜರಾಬಾದ್ ಠಾಣೆಯಲ್ಲಿ ನಾಡಿನ ಪ್ರತಿಷ್ಠಿತ ಮಠವಾದಂತ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇಬ್ಬರು ವಿದ್ಯಾರ್ಥಿನಿಯರ ಹೇಳಿಕೆ ಆಧರಿಸಿ ಎಫ್ ಐ ಆರ್ ದಾಖಲಾಗಿದೆ.

ಚಿತ್ರದುರ್ಗದ ಮುರುಘಾ ಮಠದ ವಿದ್ಯಾರ್ಥಿ ನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎಸ್ ಎಸ್ ಎಲ್ ಸಿ ಓದುತ್ತಿರುವ ವಿದ್ಯಾರ್ಥಿನಿಯರು ದೂರು ನೀಡಿದ್ದರು. ಸ್ವಾಮೀಜಿಯವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡರ್ ಅವರೇ ನಮ್ಮನ್ನು ಕಳಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು.

ಮಠ ನಡೆಸುತ್ತಿರುವ ಶಾಲೆಯಲ್ಲೇ ಈ ವಿದ್ಯಾರ್ಥಿನಿಯರು ಓದುತ್ತಿದ್ದಾರೆ ಮತ್ತು ಮಠದ ಉಚಿತ ಹಾಸ್ಟೆಲ್​ನಲ್ಲೇ ವಸತಿ ಪಡೆದಿದ್ದರು. ಈ ಸಂದರ್ಭದಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ವಿದ್ಯಾರ್ಥಿನಿಯರು ಆರೋಪ ಮಾಡಿದ್ದಾರೆ ಎಂದು ದೂರಲಾಗಿದೆ. ಇದೇ ವೇಳೆ, ಕಿರುಕುಳ ಪ್ರಶ್ನೆ ಮಾಡಿದ್ದಕ್ಕೆ ಹಾಸ್ಟೆಲ್​​ನಿಂದ ಹೊರ ಹಾಕಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಇಂಥ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರು ದೂರು ನೀಡಲು ಹೆದರುತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಒಡನಾಡಿ ಸಂಸ್ಥೆಯವರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ಹೇಳಿಕೆ ಆಧರಿಸಿ ದೂರು ನೀಡಿದ್ದರು. ವಿಚಾರಣೆ ನಡೆಸಿದಾಗ ಮಕ್ಕಳು ತಮಗಾದ ಅನುಭವವನ್ನು ಸಮಿತಿ ಮುಂದೆ ದಾಖಲಿಸಿದ್ದರು.

RELATED TOPICS:
English summary :Allegation of sexual harassment: POCSO case against Shri of Murugamath

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...