ಮುರುಘಾ ಶ್ರೀಗೆ ಸದ್ಯಕ್ಕಿಲ್ಲ ರಿಲೀಫ್, ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ | JANATA NEWS
ಚಿತ್ರದುರ್ಗ : ಮುರುಘಾ ಮಠ ಶಿವಮೂರ್ತಿ ಮುರುಘಾ ಶರಣರ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ಹಿನ್ನಲೆಯಲ್ಲಿ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ.
ನಾಳೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದೆ. ಈ ಸಂಬಂಧ ಸರ್ಕಾರಿ ಅಭಿಯೋಜಕರಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಆ.30ರಂದು ಅರ್ಜಿ ಸಲ್ಲಿಸಲಾಗಿತ್ತು.
ಅಕ್ಕಮಹಾದೇವಿ ವಸತಿ ನಿಲಯದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
RELATED TOPICS:
English summary :No relief for Muruga Shri, pending bail application adjourned