ಹಂದಿ ಜ್ವರಕ್ಕೆ 9 ತಿಂಗಳ ತುಂಬು ಗರ್ಭಿಣಿ ಬಲಿ | JANATA NEWS
ಮೈಸೂರು : ಮೈಸೂರು ಜಿಲ್ಲೆಯಲ್ಲಿ 9 ತಿಂಗಳ ತುಂಬು ಗರ್ಭಿಣಿಯೊಬ್ಬರು ಹಂದಿ ಜ್ವರಕ್ಕೆ ಬಲಿಯಾಗಿದ್ದಾರೆ.
ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿನಾಯ್ಕ ಎಂಬುವರ ಪುತ್ರಿ ಛಾಯಾ ಮೃತರು, ಛಾಯಾಗೆ 4 ವರ್ಷದ ಗಂಡು ಮಗು ಇದೆ. 2ನೇ ಮಗುವಿನ ನಿರೀಕ್ಷೆಯಲ್ಲಿ ಕುಟುಂಬವಿತ್ತು.
ಛಾಯಾಗೆ ಎಚ್1ಎನ್1 ಸೋಂಕು ತಗುಲಿತ್ತು. ಛಾಯಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಕೊನೆಯುಸಿರೆಳೆದಿದ್ದಾರೆ.
RELATED TOPICS:
English summary :9 months pregnant victim of swine flu