Sun,May19,2024
ಕನ್ನಡ / English

ಪ್ರೀಯಕರನ ಜತೆ ಹೋಟೆಲ್​ಗೆ ಹೋದ ವಿದ್ಯಾರ್ಥಿನಿ ಬರ್ಬರವಾಗಿ ಕೊಲೆ, ಪ್ರೀಯಕರ ಅರೆಸ್ಟ್ | JANATA NEWS

02 Sep 2022
3973

ಮೈಸೂರು : ಪ್ರೀಯಕರನ ಜತೆ ಹೋಟೆಲ್​ಗೆ ಹೋದ ವಿದ್ಯಾರ್ಥಿನಿ ಬರ್ಬರವಾಗಿ ಕೊಲೆಗಿದ್ದಾಳೆ. ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಯುವತಿಯನ್ನು, ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಪೂರ್ವ ಶೆಟ್ಟಿ (21) ಕೊಲೆಗೀಡಾದ ಯುವತಿಯಾಗಿದ್ದು, ಪ್ರೀಯಕರ ಆಶಿಕ್ (28) ಬಂಧಿತ ಆರೋಪಿಯಾಗಿದ್ದಾನೆ. ಕೊಲೆಯಾದ ಅಪೂರ್ವ ಶೆಟ್ಟಿಯನ್ನು ಆರೋಪಿ ಆಶಿಕ್ ಪ್ರೀತಿಸುತ್ತಿದ್ದ ಎನ್ನಲಾಗಿದೆ.

ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. ಹಲವು ವರ್ಷಗಳಿಂದ ಆಶಿಕ್ ಎಂಬ ಯುವಕನ ಜತೆ ಓಡಾಡುತ್ತಿದ್ದಳು. ಎರಡು ದಿನಗಳ ಹಿಂದೆ ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಖಾಸಗಿ ಹೋಟೆಲ್​ನಲ್ಲಿ ಆಶಿಕ್ ಜತೆ ರೂಂ ಬಾಡಿಗೆ ಪಡೆದು ವಾಸ್ತವ್ಯ ಹೂಡಿದ್ದರು. ಆಶಿಕ್ ಆಗಾಗ ಹೊರಗಡೆ ಹೋಗಿ ಮತ್ತೆ ಹೋಟೆಲ್​ಗೆ ವಾಪಸ್ ಬರುತ್ತಿದ್ದ. ನಿನ್ನೆ ಬೆಳಗ್ಗೆ ಹೋಟೆಲ್​ನಿಂದ ಹೊರಟ ಆಶಿಕ್ ಮತ್ತೆ ವಾಪಸ್ ಹೋಟೆಲ್​ಗೆ ಬಂದಿರಲಿಲ್ಲ.

ಆಕೆ ಸಂಜೆಯಾದರೂ ಹೋಟೆಲ್​ನಿಂದ ಹೊರ ಬಾರದ ಕಾರಣ ಅನುಮಾನಗೊಂಡು ಹೋಟೆಲ್ ಸಿಬ್ಬಂದಿ ರೂಂನಲ್ಲಿದ್ದ ಇಂಟರ್ ಕಾಂಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದಿದ್ದಾಗ ಅನುಮಾನಗೊಂಡ ಸಿಬ್ಬಂದಿ, ದೇವರಾಜ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಹೋಟೆಲ್​ನಲ್ಲಿ ಇಬ್ಬರ ನಡುವೆ ಗಲಾಟೆ ಶುರುವಾಗಿದೆ. ಈ ಗಲಾಟೆಯಲ್ಲಿ ಆರೋಪಿ ಆಶಿಕ್, ಅಪೂರ್ವ ಶೆಟ್ಟಿಯ ಮೇಲೆ ಹಲ್ಲೆ ಮಾಡಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಪ್ರೇಯಿಸಿಯನ್ನು ಕೊಲೆ ಮಾಡಿದ ಬಳಿಕ ಹೋಟೆಲ್ ರೂಮ್​ನಿಂದ ಎಸ್ಕೇಪ್ ಆಗಿದ್ದ ಎನ್ನಲಾಗಿದೆ.

ಬಳಿಕ ಹೋಟೆಲ್​ನಿಂದ ಹೊರಟಿದ್ದ ಆಶಿಕ್ ಕೂಡ ಪಿರಿಯಾಪಟ್ಟಣದ ಕಂಪ್ಲಾಪುರ ಬಳಿ ಆತ್ಮಹತ್ಯೆಗೆ ಯತ್ನಿಸಿ ವಿಫಲನಾಗಿದ್ದನು. ಆಶಿಕ್​ನ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆತನಿದ್ದ ಸ್ಥಳವನ್ನು ಪತ್ತೆ ಹಚ್ಚಿ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A student who went to a hotel with her boyfriend was brutally murdered, her boyfriend was arrested

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...