Fri,Dec09,2022
ಕನ್ನಡ / English

ರಾಜ್ಯದಲ್ಲಿ ಹೊಸದಾಗಿ 4,244 ಅಂಗನವಾಡಿ ಕೇಂದ್ರಗಳ ಪ್ರಾರಂಭಕ್ಕೆ ಸರ್ಕಾರ ಆದೇಶ | JANATA NEWS

03 Sep 2022
870

ಬೆಂಗಳೂರು : ರಾಜ್ಯದಲ್ಲಿ ನೂತನ 4,244 ಅಂಗನವಾಡಿ ಕೇಂದ್ರಗಳ ಆರಂಭ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

ಕಡಿಮೆ ಆದಾಯದ ಜನಸಂಖ್ಯೆ ಹೆಚ್ಚಾಗಿ ವಾಸಿಸುವ, ವಲಸೆ ಮತ್ತು ಭೂಮಿ ರಹಿತ ಕಾರ್ಮಿಕರನ್ನು ಒಳಗೊಂಡಿರುವ ಗ್ರಾಮಾಂತರದಲ್ಲಿ 1655 ಮತ್ತು ನಗರ ಪ್ರದೇಶದಲ್ಲಿ 2589 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲು ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.

ಇನ್ನು ನಗರ ಪ್ರದೇಶದಲ್ಲಿ 2,589 ಅಂಗನವಾಡಿ ಕೇಂದ್ರಗಳು ಮತ್ತು ವಲಸೆ & ಭೂರಹಿತ ಕಾರ್ಮಿಕರಿರುವ ಸ್ಥಳದಲ್ಲಿ 1,655 ಕೇಂದ್ರಗಳನ್ನು ತೆರೆಯಲು 268.98 ಕೋಟಿ ರೂಪಾಯಿಗಳ ಅನುದಾನ ಮೀಸಲಿಟ್ಟಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವ ಹಾಲಪ್ಪ ಆಚಾರ್‌, ಪ್ರಧಾನಿ ನರೇಂದ್ರ ಮೋದಿ ಅವರ ಪೋಷಣ್ ಮಾಸಾಚರಣೆಯ ಘೋಷಣೆಯ ಬೆನ್ನಲ್ಲೇ ಈ ಅಧಿಕೃತ ಆದೇಶ ಹೊರಡಿಸಿರುವುದು ಬಹಳ ಸಂತಸದ ವಿಷಯವಾಗಿದೆ.

ಕರ್ನಾಟಕ ಅಂಗನವಾಡಿ ಮತ್ತು ಪೋಷಣ್ ಅಭಿಯಾನ 2.0 ಎಂದು ಮರುನಾಮಾಂಕಿತಗೊಂಡಿರುವ ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆಯನ್ನು 1975 ರಲ್ಲಿ ಪ್ರಾರಂಭಿಸಲಾಗಿತ್ತು.

ಪ್ರಸ್ತುತ ರಾಜ್ಯದಲ್ಲಿ ಈ ಯೋಜನೆಯ ಅಡಿ ಒಟ್ಟು 66,361 ಅಂಗನವಾಡಿ ಕೇಂದ್ರಗಳು ಸ್ಥಾಪಿತವಾಗಿದ್ದು, ಅವುಗಳ ಮೂಲಕ ರಾಜ್ಯದ ಮಕ್ಕಳಿಗೆ, ಕಿಶೋರಿಯರಿಗೆ, ಗರ್ಭಿಣಿ ಸ್ತ್ರೀಯರಿಗೆ ಹಾಗೂ ಬಾಣಂತಿಯರಿಗೆ ಪೂರಕ ಪೌಷ್ಟಿಕ ಆಹಾರ, ಶಾಲಾ ಪೂರ್ವ ಶಿಕ್ಷಣ, ಪೌಷ್ಟಿಕತೆ ಮತ್ತು ಆರೋಗ್ಯ ಶಿಕ್ಷಣ ಮುಂತಾದ 6 ಸೇವೆಗಳನ್ನು ಒದಗಿಸಲಾಗುತ್ತಿದೆ.

ಪ್ರಸ್ತುತ ಈ ಯೋಜನೆಯ ಅಡಿ ಶೇಕಡಾ 56 ರಷ್ಟು ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ನೀಡಲು ಸಾಧ್ಯವಾಗಿದೆ. ಈ ಯೋಜನೆಯಿಂದ ಹೊರಗಿರುವ ಕಡಿಮೆ ಆದಾಯದ ಜನಸಂಖ್ಯೆಯು ವಾಸಿಸುವ ಪ್ರದೇಶಗಳು ಹೆಚ್ಚಾಗಿದ್ದು, ಅವರಿಗೆ 6 ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

RELATED TOPICS:
English summary :The government has ordered the opening of 4,244 new Anganwadi centers in the state

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...