Sun,May12,2024
ಕನ್ನಡ / English

ಮಕ್ಕಳ ಹಾಸ್ಟೆಲ್ ಬೆಡ್ ಶೀಟ್ ಎಲ್ಲಾ ಬದಲಾಗಿದೆ, ಎಲ್ಲಾ ಸಾಕ್ಷ್ಯನಾಶ ಮಾಡಿದ್ದಾರೆ, ಶ್ರೀಗಳು ಯಾವುದೇ ಸಾಕ್ಷ್ಯ ಉಳಿಸಿಲ್ಲ | JANATA NEWS

04 Sep 2022
2538

ಮೈಸೂರು : ಮುರುಘ ಶರಣರ ಪ್ರಕರಣದಲ್ಲಿ ಸಾಕ್ಷ್ಯ ನಾಶವಾಗಿ ಹೋಗಿದೆ. ಮಕ್ಕಳ ಹಾಸ್ಟೆಲ್ ಬೆಡ್ ಶೀಟ್ ಎಲ್ಲಾ ಬದಲಾಗಿದೆ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳನ್ನು ನಾಶ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಮುರುಘಾ ಶ್ರೀಗಳಿಂದ ಧರ್ಮ ಪೀಠಗಳಲ್ಲಿ ಬಿರುಗಾಳಿ ಎಬ್ಬಿಸಿದೆ. ಪೊಲೀಸರು ಇಡೀ ಕೇಸ್ ಅನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದರು. ಪ್ರಕರಣದ ನ್ಯಾಯಾಧೀಶರಿಗೆ ಅಭಿನಂದನೆ. ಒಡನಾಡಿಯ ಪರಶು ಸ್ಟ್ಯಾನ್ಲಿ ಅವರ ಕಾರ್ಯ ಶ್ಲಾಘನೀಯ. ಅವರ ಮೇಲೆ ಬೆದರಿಕೆ ಶುರುವಾಗಿದೆ. ಯಾವುದೇ ಆಮಿಷಗಳು ಧಮ್ಕಿ ಹಣಕ್ಕೆ ಹೆದರದೆ ಕೆಲಸ ಮಾಡಿದೆ. ಮೈಸೂರು, ಚಿತ್ರದುರ್ಗ, ಬೆಂಗಳೂರು ಸುತ್ತಿ ಕೆಲಸ ಮಾಡಿದ್ದಾರೆ. ಪರಶು ಸ್ಯ್ಟಾನ್ಲಿ ಅವರ ಸದಸ್ಯರು ಅಭಿನಂದನಾರ್ಹರು ಎಂದು ಹೇಳಿದರು.

ಆರೋಪಿಗಳನ್ನು ಮಠದ ಒಳಗೆ ಓಡಾಡಲು ಬಿಟ್ಟು ಸಾಕ್ಷ್ಯ ನಾಶಕ್ಕೆ ಅವಕಾಶ ಮಾಡಿಕೊಡಲಾಯಿತು. ಸ್ವಾಮೀಜಿಗಳು ಮಲಗುವ ಬೆಡ್, ಬೆಡ್ ಶೀಟ್‍ಗಳು ಎಲ್ಲವೂ ಬದಲಾಗಿ ಸಾಕ್ಷ್ಯ ನಾಶ ಮಾಡಲಾಗಿದೆ. ಈ ಪ್ರಕರಣದಲ್ಲಿ ಸತ್ಯನಾಶವಾಗಿದೆ ಎಂದು ಕಿಡಿಕಾರಿದರು.

ಪ್ರಕರಣದ ಆರೋಪಿಗಳು ಮಠದಲ್ಲೇ ಇದ್ದಾರೆ. ಕೆಲವು ಮಂತ್ರಿಗಳು, ಮಾಜಿ ಮಂತ್ರಿಗಳು ಸ್ವಾಮೀಜಿ ಪರವಾಗಿ ಮಾತನಾಡುತ್ತಾರೆ. ಲೈಂಗಿಕ ದೌರ್ಜನ್ಯ ಮಾಡಿದ ಸ್ವಾಮೀಜಿ ಪರವಾಗಿ ಮಾತನಾಡುವುದನ್ನು ನಿಲ್ಲಿಸಿ. ಸ್ವಾಮೀಜಿಯಿಂದ ನಾಡಿಗೆ ಕಳಂಕ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅವರು ಇಡೀ ಮಠದ ಪರಂಪರೆಗೆ ಅವಮಾನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.. ಮುಂದೆ ಸಂಸಾರಿಗಳೇ ಮಠಾಧೀಶರಾಗಲಿ. ಮದುವೆಯಾಗದವರು ಬಂದು ಮಾಡಿರೋದ‌ನ್ನು ನಾವು ನೋಡಿದ್ದೇವೆ. ನಮ್ಮಲ್ಲಿ ಸಾಕಷ್ಟು ಪೀಠಾಧಿಪತಿಗಳಿದ್ದಾರೆ ಆದರೆ ಬ್ರಹ್ಮಚಾರಿಗಳಿಲ್ಲ ಎಂದು ಹೇಳಿದರು.

ಚಿಕ್ಕಪ್ಪ, ಅಪ್ಪ ಯಾರು ಸಂಬಂಧ ಇಲ್ಲ. ಮಕ್ಕಳ ಹೇಳಿಕೆ ಮಾತ್ರ ಮುಖ್ಯ. ಮಕ್ಕಳು ಪೊಲೀಸ್ ಕೋರ್ಟ್ ಬೇರೆ ಯಾರು ತಲೆ ಹಾಕುವಂತಿಲ್ಲ. ಇದರಲ್ಲಿ ಷಡ್ಯಂತರ ಅಥವಾ ಬೇರೆ ಏನು ಇಲ್ಲ. ಇನ್ನು ಏನಾದರೂ ಇದ್ದರೆ ಅದನ್ನು ಬಯಲಿಗೆಳೆಯಬೇಕು ಎಂದು ಮೈಸೂರಿನಲ್ಲಿ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿಕೆ ನೀಡಿದರು.

RELATED TOPICS:
English summary :All childrens hostel bed sheets have been changed, all evidence has been destroyed, Mr. has not saved any evidence

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...