Thu,Sep29,2022
ಕನ್ನಡ / English

ಗಂಡನನ್ನೇ ಕೊಲೆ ಮಾಡಿ, ಪಿಡ್ಸ್ ಬಂದು ಮೃತಪಟ್ಟಿದ್ದಾನೆಂದು ಮೃತದೇಹವನ್ನು ಹುಟ್ಟೂರಿಗೆ ತೆಗೆದುಕೊಂಡು ಹೋದ ಪತ್ನಿ | JANATA NEWS

04 Sep 2022
502

ಬೆಂಗಳೂರು : ಗಂಡನನ್ನೇ ಕೊಲೆ ಮಾಡಿ, ನಾಟಕವಾಡಿದ್ದ ಖತರ್ನಾಕ್​ ಪತ್ನಿಯನ್ನು ಬೆಂಗಳೂರು ಪೊಲೀಸರು ಮಂಡ್ಯದಲ್ಲಿ ಬಂಧಿಸಿದ್ದಾರೆ.

ಮಹೇಶ್ ಕೊಲೆಯಾದ ದುರ್ದೈವಿ. ಶಿಲ್ಪಾ ಬಂಧಿತ ಮಹಿಳೆ. ಮಂಡ್ಯ ಮೂಲದ ಮಹೇಶ್, ಬೆಂಗಳೂರಿನ ಶಿಲ್ಪಾಳನ್ನು ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ. ಮದುವೆಯಾದ ಬಳಿಕ ಇಬ್ಬರು ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು.

ಇತ್ತೀಚಿಗೆ ಶಿಲ್ಪಾ ಬೆಂಗಳೂರಲ್ಲಿ ವಾಸವಿದ್ರೆ ಕೆಲಸದ ನಿಮಿತ್ತ ಮಹೇಶ್ ಮಂಡ್ಯದಲ್ಲಿ ವಾಸವಿದ್ದ. ಆಗಾಗ ಬೆಂಗಳೂರಿಗೆ ಬಂದು ಹೋಗ್ತಿದ್ದ ಮಹೇಶ್ ಕುಡಿದು ನಿನಗೆ ಅನೈತಿಕ ಸಂಬಂಧ ಇದೆ ಎಂದು ಶಿಲ್ಪಾಗೆ ಕಾಟ ನೀಡುತ್ತಿದ್ದ. ಬೇಸತ್ತ ಶಿಲ್ಪಾ ತನ್ನ ತಾಯಿ ಬಳಿ ಹೇಳಿಕೊಂಡಿದ್ದಳು.

ಕಳೆದ ಗುರುವಾರವೂ ಶಿಲ್ಪಾಳನ್ನು ಭೇಟಿಯಾಗಲು ಬಂದ ಮಹೇಶ್ ಗಲಾಟೆ ಮಾಡುತ್ತಿದ್ದ. ಈ ವಿಚಾರದಲ್ಲಿ ಅಳಿಯನಿಗೆ ಬುದ್ಧಿವಾದ ಹೇಳುವಂತೆ ಶಿಲ್ಪಾಳ ತಾಯಿ ತನ್ನ ಹಿರಿಯ ಮಗಳ ಮಗ ಬಾಲಾಜಿಗೆ ಹೇಳಿದ್ದಳು.

ಬುದ್ಧಿ ಹೇಳಲು ಬಂದಿದ್ದ ಬಾಲಾಜಿ ಸಿಟ್ಟಿನಿಂದ ಮಹೇಶ್ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದ. ಈ ವೇಳೆ ಮಹೇಶ್ ಮೃತಪಟ್ಟಿದ್ದ. ಬಳಿಕ ಮೂರ್ಛೆ ರೋಗದಿಂದ ಮಹೇಶ್ ಸಾವನ್ನಪ್ಪಿದ್ದಾನೆ ಎಂದು ಮೃತದೇಹವನ್ನು ಶಿಲ್ಪಾ ಆತನ ಹುಟ್ಟೂರಿಗೆ ತೆಗೆದುಕೊಂಡು ಹೋಗಿದ್ದಳು. ಅನುಮಾನಗೊಂಡ ಮಹೇಶ್ ಪೋಷಕರು ಮಂಡ್ಯ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು.

ಬಳಿಕ ಶಿಲ್ಪಾಳನ್ನು ವಶಕ್ಕೆ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಕೊಲೆಗೆ ಸಹಕರಿಸಿದ ಶಿಲ್ಪಾ, ಆಕೆಯ ತಾಯಿಯನ್ನ ಮಂಡ್ಯ ಪೊಲೀಸರು ವಶಕ್ಕೆ ಪಡೆದು, ಪ್ರಕರಣವನ್ನು ಕೋಣನಕುಂಟೆ ಠಾಣೆಗೆ ವರ್ಗಾಯಿಸಿದ್ದಾರೆ. ಆರೋಪಿ‌ ಬಾಲಾಜಿ ತಲೆಮರೆಸಿಕೊಂಡಿದ್ದು ಶೋಧಕಾರ್ಯ ಮುಂದುವರೆದಿದೆ.

RELATED TOPICS:
English summary :The wife killed her husband along with her lover and took the dead body to her hometown claiming that he was dead.

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...