ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಶ್ರೀಗಳಿಗೆ 9 ದಿನಗಳ ನ್ಯಾಯಾಂಗ ಬಂಧನ | JANATA NEWS

ಚಿತ್ರದುರ್ಗ : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮರುಘಾಮಠದ ಸ್ವಾಮೀಜಿಗೆ 9 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಚಿತ್ರದುರ್ಗದ 2 ನೇ ಹೆಚ್ಚುವರಿ ನ್ಯಾಯಾಲಯ ಆದೇಶ ನೀಡಿದ್ದು, ಮುರುಘಾ ಶರಣರು ಎರಡನೇ ಬಾರಿಗೆ ಕಾರಾಗೃಹ ಪಾಲಾಗಿದ್ದಾರೆ.
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗಳನ್ನು ಬಂಧಿಸಲಾಗಿತ್ತು. ಇದೀಗ ಅವರಿಗೆ ನ್ಯಾಯಾಲಯ ಸೆಪ್ಟೆಂಬರ್ 14 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವಿಚಾರಣೆ ನಡೆಸಿದ 2 ನೇ ಹೆಚ್ಚುವರಿ ನ್ಯಾಯಾಲಯ ಮುರುಘಾಶ್ರೀಗಳಿಗೆ ಸೆಪ್ಟೆಂಬರ್ 14 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಚಿತ್ರದುರ್ಗದ ಎರಡನೇ ಅಪರ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೋಮಲ ಅವರು ಈ ಆದೇಶ ನೀಡಿದ್ದಾರೆ.
ಮುರುಘಾ ಶ್ರೀಗಳು ಜೈಲಿಗೆ ಸ್ಥಳಾಂತರ ಮಾಡಲಿದ್ದಾರೆ. ಈ ಹಿನ್ನೆಲೆ ಚಿತ್ರದುರ್ಗ ಜಿಲ್ಲಾ ಕಾರಾಗೃಹದ ಬಳಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಜೈಲಿನ ಮುಂಭಾಗದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು, ಸ್ಥಳೀಯ ಪೊಲೀಸರು ಸೇರಿದಂತೆ KSRP ತುಕಡಿ ನಿಯೋಜನೆ ಮಾಡಲಾಗಿದೆ.