Fri,Dec09,2022
ಕನ್ನಡ / English

ಗಣಪತಿಯನ್ನು ವಿಸರ್ಜಿಸಿ ಬರುವಾಗ ವಿದ್ಯುತ್​ ತಂತಿ ತಗುಲಿ ಟ್ರ್ಯಾಕ್ಟರ್​ನಲ್ಲಿದ್ದ ಮೂವರ ಸಾವು, 6 ಮಂದಿ ಗಂಭೀರ ಗಾಯ | JANATA NEWS

07 Sep 2022
970

ಚಿಕ್ಕಮಗಳೂರು : ಗಣಪತಿ ವಿಸರ್ಜನೆ ಮಾಡಿ ಹಿಂದಿರುಗುತ್ತಿದ್ದ ವೇಳೆ ಟ್ಯಾಕ್ಟರ್ ನಲ್ಲಿದ್ದ ಮಂಟಪಕ್ಕೆ ಮಾಡಿದ್ದ ಅಲಂಕೃತ ಕಮಾನಿಗೆ ವಿದ್ಯುತ್ ತಂತಿ ತಗುಲಿ ಮೂವರು ಮೃತ ಪಟ್ಟು, 6 ಮಂದಿ ಗಂಭೀರ ಗಾಯಗೊಂಡಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಜಿ.ಹೊಸಳ್ಳಿ ಗ್ರಾಮದ ರಾಜು(50), ಪಾರ್ವತಿ(28) ಹಾಗೂ ರಚನಾ(22) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸಂಗೀತಾ(18) ಎಂಬ ಯುವತಿ ಹಾಗೂ ಹಾಗೂ ಪಲ್ಲವಿ(13) ಎಂಬ ಬಾಲಕಿ ಗಂಭೀರ ಸ್ಥಿತಿಯಲ್ಲಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೌರಿ(40) ಮಹಿಳೆ ವಿದ್ಯುತ್ ಪ್ರವಹಿಸಿ ಅಸ್ವಸ್ಥರಾಗಿದ್ದು, ಅವರಿಗೆ ಮೂಡಿಗೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿ.ಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡಲಾಗಿದ್ದು, ಮಂಗಳವಾರ ರಾತ್ರಿ ಟ್ರ್ಯಾಕ್ಟರ್ ಮೂಲಕ ಗಣೇಶ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ನದಿಯಲ್ಲಿ ವಿಸರ್ಜನೆ ಮಾಡಲಾಗಿತ್ತು.

ಹಿಂದಿರುಗುತ್ತಿದ್ದ ವೇಳೆ ಟ್ಯಾಕ್ಟರ್‌ಗೆ ಕಟ್ಟಲಾಗಿದ್ದ ಕಮಾನು ರಸ್ತೆ ಬದಿಯಲ್ಲಿದ್ದ ವಿದ್ಯುತ್ ತಂತಿಗೆ ತಗುಲಿದೆ. ಟ್ರಾಲಿ ತುಂಬೆಲ್ಲ ವಿದ್ಯುತ್​ ಪ್ರವಹಿಸಿದೆ. ವಿದ್ಯುತ್ ಶಾಕ್​ನಿಂದಾಗಿ ತೀವ್ರ ಅಸ್ಪಸ್ಥರಾಗಿದ್ದವರನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪ್ಪಿದ್ದಾರೆ. ವಿದ್ಯುತ್ ಪ್ರವಹಿಸಿ ತೀವ್ರ ಅಸ್ವಸ್ಥರಾಗಿದ್ದ ಸಂಗೀತ ಹಾಗೂ ಪಲ್ಲವಿ ಎಂಬುವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ರವಾನಿಸಲಾಗಿದೆ.

ಕುಟುಂಬಸ್ಥರು ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೂಡಿಗೆರೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :3 killed, 6 seriously injured in tractor hit by electric wire while offering Ganapathi

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...