ಗಂಡ-ಹೆಂಡತಿ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯ! | JANATA NEWS

ಶಿವಮೊಗ್ಗ : ಪತಿ-ಪತ್ನಿ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗ ನಗರದ ಬೈಪಾಸ್ ರಸ್ತೆಯ ಪ್ರಿಯಾಂಕಾ ಲೇಔಟ್‌ನಲ್ಲಿ ಸಂಭವಿಸಿದೆ.
ಮೃತರನ್ನು ಮಂಜುಳಾ (35) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಮೆಸ್ಕಾಂ ನೌಕರ ದಿನೇಶ್ ಎಂಬಾತ 12 ವರ್ಷದ ಹಿಂದೆ ಶಿವಮೊಗ್ಗ ತಾಲೂಕಿನ ಮತ್ತಿಘಟ್ಟ ಗ್ರಾಮದ ಮಂಜುಳಾ ಅವರೊಂದಿಗೆ ಮದುವೆಯಾಗಿದ್ದ. ದಂಪತಿಗೆ 10 ಮತ್ತು 4 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಚಾಕುವಿನಿಂದ ಕತ್ತಿಗೆ ಚುಚ್ಚಿದ ಸ್ಥಿತಿಯಲ್ಲಿ ಮಂಜುಳಾ ಶವ ಪತ್ತೆಯಾಗಿದೆ. ಪತ್ನಿಯನ್ನು ಕೊಂದ ಬಳಿಕ ಪತಿ ದಿನೇಶ್ ತನ್ನ ಕೈಯನ್ನೂ ಚಾಕುವಿನಿಂದ ಕತ್ತರಿಸಿ ಕೊಂಡಿದ್ದಾನೆ. ಮಕ್ಕಳು ಬೆಳಿಗ್ಗೆ ಎದ್ದು ನೋಡಿದಾಗ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ತಂದೆ ಪ್ರಜ್ಞೆ ತಪ್ಪಿ ಬಿದ್ದಿರುವುದನ್ನು ಕಂಡಿದ್ದಾರೆ.
ಕೂಡಲೇ ಮಕ್ಕಳು ಸಂಬಂಧಿಕರಿಗೆ ವಿಷಯ ತಿಳಿಸಿದ್ದಾರೆ. ಸಂಬಂಧಿಕರು ಬಂದು ದಿನೇಶ್‌ನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
ದಿನೇಶ್ ಪ್ರತಿದಿನ ಮನೆಗೆ ತಡವಾಗಿ ಬರುತ್ತಿದ್ದ. ಇದೇ ಕಾರಣಕ್ಕೆ ದಂಪತಿ ನಡುವೆ ಜಗಳವಾಗುತ್ತಿತ್ತು. ಮಂಗಳವಾರ ರಾತ್ರಿಯೂ ಇದೇ ವಿಚಾರಕ್ಕೆ ದಂಪತಿ ಜಗಳವಾಡಿದ್ದಾರೆ. ಮಾತಿಗೆ ಮಾತು ಬೆಳೆದು ದಿನೇಶ್ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಪತ್ನಿ ಮಂಜುಳಾ ಅವರ ಕುತ್ತಿಗೆ ಕೊಯ್ದಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಂಜುಳಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಟ್ಟಿನಿಂದ ಕೊಲೆ ಮಾಡಿದ ದಿನೇಶ್, ಹೆದರಿ ತಾನೂ ಬ್ಲೇಡ್‌ನಿಂದ ಕೈಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ
ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.