Thu,Sep29,2022
ಕನ್ನಡ / English

ಮಂಡ್ಯ ಹನಿಟ್ರ್ಯಾಪ್: ಆಡಿಯೋ ವೈರಲ್ ಆದ ಬೆನ್ನಲ್ಲೇ ಯುವತಿ ಜೊತೆ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಚಿನ್ನದ ವ್ಯಾಪಾರಿ | JANATA NEWS

08 Sep 2022
486

ಮಂಡ್ಯ : ಮಂಡ್ಯದ ಚಿನ್ನದ ವ್ಯಾಪಾರಿಯ ಹನಿಟ್ರ್ಯಾಪ್ ಪ್ರಕರಣ ಇದೀಗ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ.

ಚಿನ್ನದ ಅಂಗಡಿ ಮಾಲೀಕ, ಬಿಜೆಪಿ ಮಖಂಡ ಜಗನ್ನಾಥ ಶೆಟ್ಟಿ ಹನಿಟ್ರ್ಯಾಪ್ ಸುಳಿಗೆ ಸಿಲುಕಿ, 50 ಲಕ್ಷ ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿತ್ತು. ಈ ಬಗ್ಗೆ ಅವರು ಸಲ್ಮಾ ಭಾನು ವಿರುದ್ಧ ಕೇಸ್‌ ದಾಖಲಾಗಿದ್ದು, ಆಕೆಯನ್ನು ಪೊಲೀಸು ಅರೆಸ್ಟ್ ಸಹ ಮಾಡಿದ್ದಾರೆ. ಆದರೆ, ಇದೀಗ ಇದೇ ಬಿಜೆಪಿ ಮಖಂಡ ಜಗನ್ನಾಥ ಶೆಟ್ಟಿ ಯುವತಿಯೊಂದಿಗೆ ಲಾಡ್ಜ್‌ವೊಂದರಲ್ಲಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದು, ವಿಡಿಯೋ ಫುಲ್ ವೈರಲ್ ಅಗಿದೆ.

ಕಾಲೇಜ್ ಲೆಕ್ಚರರ್ ಎಂದು ಹೇಳಿಕೊಂಡು ಟ್ಯೂಷನ್‌ ಹೇಳಿಕೊಡುತ್ತೇನೆ ಎಂದ ಯುವತಿಯನ್ನು ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದಾರೆ. ಯುವತಿ ಜೊತೆ ಜಗನ್ನಾಥ್ ಇರುವ ವಿಚಾರ ತಿಳಿದು ಅಲರ್ಟ್ ಆದ ಸಲ್ಮಾ ಗ್ಯಾಂಗ್​​ ತಕ್ಷಣ ಮೈಸೂರಿನ ದರ್ಶನ್ ಲಾಡ್ಜ್‌ಗೆ ನುಗ್ಗಿದ್ದಾರೆ. ಒಳ ನುಗ್ಗುತ್ತಿದ್ದಂತೆ ಗ್ಯಾಂಗ್ ವಿಡಿಯೋ ಚಿತ್ರೀಕರಣ ಮಾಡಿದ್ದು, ಯುವತಿ, ಜಗನ್ನಾಥ ಶೆಟ್ಟಿಗೆ ಮನಬಂದಂತೆ ಥಳಿಸಿದ್ದಾರೆ. ಯುವತಿಯೊಂದಿಗೆ ಇರುವ ವಿಡಿಯೋ ಫುಲ್ ವೈರಲ್ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಶೆಟ್ಟಿ, ಮಂಡ್ಯದ ಶ್ರೀನಿಧಿ ಗೋಲ್ಡ್​ ಮಾಲೀಕ ಜಗನ್ನಾಥ್ ಶೆಟ್ಟಿ ಮೈಸೂರಿನ ಲಾಡ್ಜ್‌ವೊಂದರಲ್ಲಿ ಯುವತಿಯೊಂದಿಗೆ ಇರುವುದರನ್ನು ಸಲ್ಮಾ ಗ್ಯಾಂಗ್ ರೆಡ್​ ಹ್ಯಾಂಡ್‌ ಆಗಿ ಹಿಡಿದಿದೆ.

ಈ ಎಲ್ಲಾ ವೀಡಿಯೋ ವೈರಲ್ ಆಗುವ ಮುನ್ನವೇ ಜಗನ್ನಾಥಶೆಟ್ಟಿ ಸಲ್ಮಾ ಮತ್ತು ತಂಡದ ವಿರುದ್ಧ ದೂರು ದಾಖಲಿಸಿದ್ದಾರೆ. ಮಂಗಳೂರಿಗೆ ಹೋಗಲೆಂದು ಮಂಡ್ಯದಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ಜಗನ್ನಾಥ್ ರನ್ನು ಮೈಸೂರಿಗೆ ಡ್ರಾಪ್ ಕೊಡುವುದಾಗಿ ನಾಲ್ವರು ಕಾರಿನಲ್ಲಿ ಕರೆದೊಯ್ದು ನಂತರ ಚಿನ್ನದ ಪರೀಕ್ಷೆಗೆಂದು ನನ್ನನ್ನು ಅಪಹರಿಸಿ ಲಾಡ್ಜ್‌ಗೆ ಕರೆದೊಯ್ದು ಕೂಡಿಹಾಕಿದ್ದರು.

ಬಳಿಕ ಯುವತಿಯೊಬ್ಬಳನ್ನು ಕೊಠಡಿಗೆ ಕಳುಹಿಸಿ, ಈಕೆಯೊಂದಿಗೆ ಏಕೆ ಬಂದಿದ್ದೀಯಾ ಎಂದು ಹಲ್ಲೆ ನಡೆಸಿದರು. ನಂತರ 50 ಲಕ್ಷರೂ ಕೊಡಬೇಕು ಇಲ್ಲದಿದ್ದರೆ ನಿನ್ನನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಇದರಿಂದ ಆತಂಕಗೊಂಡ ನಾನು ನನ್ನ ಸ್ನೇಹಿತರಾದ ಶ್ರೀನಿವಾಸಶೆಟ್ಟಿ ಮತ್ತು ಇತರರಿಂದ ಹಣ ತರಿಸಿಕೊಟ್ಟಿದ್ದಾಗಿ ದೂರಿನಲ್ಲಿ ತಿಳಿಸಿದ್ದರು.

ಈ ಹಿಂದೆ ಹನಿಟ್ರ್ಯಾಪ್ ಕೇಸ್ ನೀಡಿದ್ದ ಜಗನ್ನಾಥ ಶೆಟ್ಟಿ ನಡೆ ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

RELATED TOPICS:
English summary :Mandya Honeytrap: Gold trader caught red-handed with young woman after audio goes viral

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...