Tue,Apr23,2024
ಕನ್ನಡ / English

ಆಯುಷ್ಮಾನ್‌ ಭಾರತ್‌ ಅಡಿಯಲ್ಲಿ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲು ಕ್ರಮ | JANATA NEWS

08 Sep 2022
2482

ಬೆಂಗಳೂರು : ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲು ಕ್ರಮ ವಹಿಸಿದ್ದಾರೆ.

ಹಾಗೆಯೇ, ಹೆಚ್ಚು ಚಿಕಿತ್ಸಾ ವೆಚ್ಚ ತಗುಲುವ ಕಾಯಿಲೆಗಳಿಗೂ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗಿದೆ. ಈ ಮೂಲಕ ಬಡ ಜನರ ಆರೋಗ್ಯ ರಕ್ಷಣೆಗೆ ಹೊಸ ಕೊಡುಗೆಯನ್ನು ರಾಜ್ಯ ಸರ್ಕಾರ ನೀಡಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಇದರಿಂದ ಬಹಳಷ್ಟು ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.

ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ, ವಿವಿಧ ಕಾಯಿಲೆಗಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಚಿಕಿತ್ಸಾ ವೆಚ್ಚ ಭರಿಸಲಾಗುತ್ತಿದೆ. ಆದರೆ ಕೆಲ ವಿರಳ ಕಾಯಿಲೆಗಳನ್ನು ಈ ಯೋಜನೆಯಡಿ ಸೇರಿಸಲಾಗಿಲ್ಲ. ಅಲ್ಲದೆ ಇಂತಹ ರೋಗಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಇರುವುದಿಲ್ಲ. ಅಂತಹ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿ ಆ ವೆಚ್ಚವನ್ನು ಭರಿಸಬೇಕಾಗುತ್ತದೆ.

ಈ ಹಿನ್ನೆಲೆಯಲ್ಲಿ, ಚಿಕಿತ್ಸೆಗಳು ಹಾಗೂ ವೆಚ್ಚದ ಪಟ್ಟಿಯನ್ನು ಸಿದ್ಧಪಡಿಸಿದ್ದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌, ಈ ಕುರಿತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ. ಇದರ ಜೊತೆಗೆ, ಹೆಚ್ಚು ವೆಚ್ಚ ತಗುಲುವ ಕಾಯಿಲೆಗಳ ಚಿಕಿತ್ಸಾ ವಿಧಾನ ಗುರುತಿಸಿ, ಅವುಗಳಿಗೂ ವೆಚ್ಚ ನಿಗದಿ ಮಾಡಲು ಕ್ರಮ ವಹಿಸಲಾಗಿದೆ.

ಇದಕ್ಕಾಗಿ ಗಿರಿಜನ ಉಪಯೋಜನೆಯಡಿ 7.39 ಕೋಟಿ ರೂ., ಪರಿಶಿಷ್ಟ ಜಾತಿ ಉಪಯೋಜನೆಯಡಿ 15.79 ಕೋಟಿ ಸೇರಿ, ಒಟ್ಟು 23.18 ಕೋಟಿ ರೂ. ಮೊತ್ತವನ್ನು ಪುನರ್‌ ವಿನಿಯೋಗದ ಮೂಲಕ ಬಿಡುಗಡೆ ಮಾಡಿ ಆದೇಶಿಸಲಾಗಿದೆ. ಪಿಇಟಿ ಸ್ಕ್ಯಾನ್‌ಗೆ 10,000 ರೂ., ಅಸ್ತಿ ಮಜ್ಜೆ ಕಸಿಗೆ ಎರಡು ವಿಧಾನಗಳಲ್ಲಿ 7 ಲಕ್ಷ ರೂ. ಹಾಗೂ 21 ಲಕ್ಷ ರೂ., ರೋಬೋಟಿಕ್‌ ಸರ್ಜರಿಗೆ 1.50 ಲಕ್ಷ ರೂ. ಸೇರಿದಂತೆ ವಿವಿಧ ಚಿಕಿತ್ಸೆಗಳಿಗೆ ವೆಚ್ಚ ನಿಗದಿ ಮಾಡಲಾಗಿದೆ ಎಂದರು

RELATED TOPICS:
English summary :Under Ayushman Bharat, the move is to cover the cost of treatment for rare diseases as well

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...