ಕಾಡಾನೆ ದಾಳಿಯಲ್ಲಿ ವ್ಯಕ್ತಿಯೊಬ್ಬ ಮೃತ, ಸ್ಥಳೀಯರ ಪ್ರತಿಭಟನೆ, ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ | JANATA NEWS

ಚಿಕ್ಕಮಗಳೂರು : ಮೂಡಿಗೆರೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ ಮೃತಪಟ್ಟ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಸ್ಥಳೀಯರು ಪ್ರತಿಭಟನೆಗಿಳಿದರು.
ಕಾಡಾನೆ ದಾಳಿ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಮೂಡಿಗೆರೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮದಲ್ಲಿ ನಿನ್ನೆ ತೋಟದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿಯಿಂದಾಗಿ ಅರ್ಜುನ್ ಎಂಬ ಕಾರ್ಮಿಕರೊಬ್ಬರು ಮೃತಪಟ್ಟಿದ್ದರು. ಈ ದಾಳಿಯನ್ನ ಖಂಡಿಸಿ ಮೂಡಿಗೆರೆ ಅರಣ್ಯ ಇಲಾಖೆ ಕಚೇರಿ ಮುಂದೆ ಅರ್ಜುನ್ ಮೃತದೇಹವಿಟ್ಟು ಪ್ರತಿಭಟನೆ ನಡೆಸುತ್ತಿದ್ದರು.
ಅಲ್ಲದೇ ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ, ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಎಷ್ಟೇ ಹರಸಾಹಸ ಪಟ್ಟರೂ ಸಾಧ್ಯವಾಗಿಲ್ಲ. ಹೀಗಾಗಿ, ಪೊಲೀಸರ ಮಾತು ಕೇಳದ ಹಿನ್ನೆಲೆ ಅವರ ಮೇಲೆ ಸಿಬ್ಬಂದಿ ಲಾಠಿಚಾರ್ಜ್ ನಡೆಸಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿದೆ.