Thu,Sep29,2022
ಕನ್ನಡ / English

ಸಿದ್ದರಾಮಯ್ಯರ ರಾಜಕೀಯ ಅನುಭವ, ಹಿರಿತನ ಮತ್ತು ಯೋಗ್ಯತೆ‌ ಬಗ್ಗೆ ಕೀಳಾಗಿ ಮಾತಾಡುವ ರವಿ ತಮ್ಮ ಯೋಗ್ಯತೆಯೇನು? | JANATA NEWS

13 Sep 2022
447

ಬೆಂಗಳೂರು : ಸಿದ್ದರಾಮಯ್ಯರ ರಾಜಕೀಯ ಅನುಭವ, ಹಿರಿತನ ಮತ್ತು ಯೋಗ್ಯತೆ‌ ಬಗ್ಗೆ ಕೀಳಾಗಿ ಮಾತಾಡುವ ರವಿ ತಮ್ಮ ಯೋಗ್ಯತೆಯೇನು? ಎಂದು ಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ಹೇಳಿಕೆಗೆ ದಿನೇಶ್ ಗುಂಡೂರಾವ್ ಕಿಡಿಕಾರಿದ್ದು, ಟ್ವೀಟ್ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ಹೇಳಿಕೆಗೆ ದಿನೇಶ್ ಗುಂಡೂರಾವ್ ಕಿಡಿಕಾರಿದ್ದು, ಈ ಕುರಿತು ಸರಣಿ ಟ್ವೀಟ್ ಮಾಡಿದ್ದಾರೆ. ಸಿದ್ದರಾಮಯ್ಯರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತಾಡಿರುವ ಸಿ.ಟಿ ರವಿ ತಮ್ಮ ಸಂಸ್ಕಾರವೇನು ಎಂಬುದನ್ನು ತೋರಿಸಿಕೊಂಡಿದ್ದಾರೆ. ಸಾರ್ವಜನಿಕ ಜೀವನದಲ್ಲಿರುವವರು ತಾವು ಬಳಸುವ ಭಾಷೆಯ ಮೇಲೆ ಹಿಡಿತವಿರಬೇಕು. ರವಿ ಸಾರ್ವಜನಿಕ ಜೀವನದಲ್ಲಿರುವವರು, ಜೊತೆಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಈ ಸ್ಥಾನದ ಘನತೆಗೆ ತಕ್ಕ ಮಾತಾಡಲಿ ಎಂದು ಸಲಹೆ ನೀಡಿದ್ದಾರೆ.

ಸಿ.ಟಿ ರವಿಯವರಿಗೆ 'ಲೂಟಿ ರವಿ' ಎಂಬ ಅನ್ವರ್ಥನಾಮ ಇಟ್ಟಿದ್ದು ಸಿದ್ದರಾಮಯ್ಯರಲ್ಲ. ಸ್ವತಃ ಅವರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೇ ಲೂಟಿ ರವಿ ಎನ್ನುತ್ತಾರೆ. ಇದನ್ನು ಸಿದ್ದರಾಮಯ್ಯ‌ ಹೇಳಿದ್ದೇ ರವಿಯವರಿಗೆ ಚೇಳು ಕಡಿದಂತಾಗಿದೆ. ಹಾಗಾಗಿ ಸಿದ್ದರಾಮಯ್ಯರ ವಿರುದ್ಧ ಕೀಳು‌ ಪದಪ್ರಯೋಗ ಮಾಡಿ ರವಿ ತಮ್ಮ ಹೊಲಸು ನಾಲಗೆ ಪ್ರದರ್ಶಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೆಯನ್ನು ಸಹ ಸಮರ್ಥಿಸಿಕೊಂಡಿದ್ದಾರೆ.

ಕೆಲವರಿಗೆ ದೊಡ್ಡವರನ್ನು ತೆಗಳಿ ದೊಡ್ಡವರೆನಿಸಿಕೊಳ್ಳುವ ಚಟವಿರುತ್ತದೆ. ಸಿಟಿ ರವಿಗೂ ಈ ಚಟವಿದೆ. ಸಿದ್ದರಾಮಯ್ಯರ ರಾಜಕೀಯ ಅನುಭವ, ಹಿರಿತನ ಮತ್ತು ಯೋಗ್ಯತೆ ಈ ನಾಡಿಗೆ ತಿಳಿದಿದೆ. ಅವರ ಬಗ್ಗೆ ಕೀಳಾಗಿ ಮಾತಾಡುವ ರವಿ ತಮ್ಮ ಯೋಗ್ಯತೆಯೇನು ಎಂದು ಆತ್ಮವಿಮರ್ಶೆ ಮಾಡಿಕೊಳ್ಳಲಿ. ಪುಂಡು ಪೋಕರಿಯಂತೆ ಮಾತಾಡಿದರೆ ಗೌರವ ಉಳಿಯುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

RELATED TOPICS:
English summary :What is the merit of Ravi who talks down about Siddaramaiah political experience, seniority and competence?

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...