Fri,Dec09,2022
ಕನ್ನಡ / English

ಅಕ್ರಮ ಸಂಬಂಧಕ್ಕೆ ಬೇಸತ್ತು ತವರು ಸೇರಿದ ಪತ್ನಿ, ವಾಪಾಸ್ ಬರಲು ನಿರಾಕರಿಸಿದಕ್ಕೆ ಗುಂಡು ಹಾರಿಸಿದ ಪತಿ ಅರೆಸ್ಟ್ | JANATA NEWS

13 Sep 2022
801

ಬೆಳಗಾವಿ : ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ತವರು ಸೇರಿದ ಪತ್ನಿಯ ತವರು ಮನೆಯಿಂದ ಬಾರದ ಹಿನ್ನೆಲೆ ಪತ್ನಿ ಮೇಲೆ ಪತಿ ​ಗುಂಡು ಹಾರಿಸಿದ್ದ ಘಟನೆ ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ಸೆ.11ರಂದು ನಡೆದಿದೆ.

ಶಿವಾನಂದ ಎಂಬುವವರು ತನ್ನ ಪತ್ನಿ ಪ್ರೀತಿ ಮೇಲೆ ಗುಂಡು ಹಾರಿಸಿದ್ದರು. ಲೋಕೋಪಯೋಗಿ ಇಲಾಖೆಯಲ್ಲಿ ಗುತ್ತಿಗೆದಾರರಾಗಿರುವ ಶಿವಾನಂದ ಕಾಲೆಬಾಗನನ್ನು ಪೊಲೀಸರು ಬಂಧಿಸಿದ್ದಾರೆ.

4 ವರ್ಷದ ಹಿಂದೆ ಶಿವಾನಂದನನ್ನು ಪ್ರೀತಿ ಮದುವೆಯಾಗಿದ್ದರು. ಅನೈತಿಕ ಸಂಬಂಧ ಹೊಂದಿದ್ದ ಶಿವಾನಂದ ನಿತ್ಯವೂ ಹೆಂಡತಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ಪ್ರೀತಿ ಗಂಡನ ಮನೆಯಿಂದ ತವರು ಮನೆ ಸೇರಿದ್ದರು.

ಅವರ ಮನೆಗೆ ಹೋಗಿದ್ದ ಶಿವಾನಂದ ಕಾಗಲೆ, ವಾಪಸಾಗುವಂತೆ ಪತ್ನಿಯ ಮೇಲೆ ಗುಂಡು ಹಾರಿಸಿದ್ದಾನೆ. ಒಂದು ವೇಳೆ ವಾಪಸ್​ ಆಗದಿದ್ದರೆ ಇದೇ ಗುಂಡಿನಿಂದ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಆದರೆ ಗುಂಡಿನಿಂದ ತಪ್ಪಿಸಿಕೊಂಡು ಪತ್ನಿ ಪ್ರೀತಿ ಪ್ರಾಣ ಉಳಿಸಿಕೊಂಡಿದ್ದಾರೆ.

ಆದ್ರೆ ಸೆ.11ರ ರಾತ್ರಿ ಏಕಾಏಕಿ ಮನೆಗೆ ಬಂದು ತನ್ನೊಟ್ಟಿಗೆ ಬರುವಂತೆ ಶಿವಾನಂದ ಒತ್ತಾಯಿಸಿದ್ದಾರೆ. ಈ ವೇಳೆ ಬರುವುದಿಲ್ಲ ಅಂದಿದ್ದಕ್ಕೆ ತನ್ನಲ್ಲಿದ್ದ ಪಿಸ್ತೂಲ್ ನಿಂದ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ್ದಾರೆ.

ಎರಡು ಗುಂಡು ಹಾರಿಸಿ ನಾಲ್ಕು ಗುಂಡು ಬಾಕಿ ಇಟ್ಟುಕೊಂಡಿದ್ದ ಶಿವಾನಂದ, ಮನೆಗೆ ಬರಲಿಲ್ಲವೆಂದರೆ ಎರಡು ಗುಂಡು ನಿನಗೆ ಹಾರಿಸಿ ಎರಡು ಗುಂಡು ನಾನು ಹಾರಿಸಿಕೊಳ್ತಿನಿ ಅಂತ ಧಮ್ಕಿ ಹಾಕಿದ್ದಾನೆ. ಪತ್ನಿ ನೀಡಿದ ದೂರಿನನ್ವಯ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

RELATED TOPICS:
English summary :The wife who returned to her hometown after being fed up with the illicit relationship, the husband who shot her for refusing to come back, was arrested

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...