Thu,Sep29,2022
ಕನ್ನಡ / English

ಕಾಂಗ್ರೆಸ್ ಛೋಡೋ : 11 ಶಾಸಕರ ಪೈಕಿ 8 ಗೋವಾ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ | JANATA NEWS

14 Sep 2022
416

ಪಣಜಿ : ಗೋವಾದಲ್ಲಿ ಕಾಂಗ್ರೆಸ್ ಪಕ್ಷದ 11 ಶಾಸಕರ ಪೈಕಿ 8 ಶಾಸಕರು ಉನ್ನತ ನಾಯಕರಾದ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೋ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿಗೆ ಇಂದು ಸೇರ್ಪಡೆಗೊಂಡರು. ಈ ಮೂಲಕ 40 ಸ್ಥಾನದ ಸದನದಲ್ಲಿ ವಿರೋಧ ಪಕ್ಷವನ್ನು ಕೇವಲ ಮೂರಕ್ಕೆ ಇಳಿಸಲಾಯಿತು.

ರಾಹುಲ್ ಗಾಂಧಿಯವರ "ಭಾರತ್ ಜೋಡೋ ಯಾತ್ರೆ"(ಭಾರತ ಒಗ್ಗೂಡಿಸು ಪಾದಯಾತ್ರೆ) ಮಧ್ಯದಲ್ಲಿ ಈ ಸಾಮೂಹಿಕ ಪಕ್ಷಾಂತರವು ಪಕ್ಷಕ್ಕೆ ಭಾರಿ ಮುಜುಗರವನ್ನುಂಟುಮಾಡಿದೆ. ಈ ಯಾತ್ರೆ ಕುರಿತು ಬಿಜೆಪಿ ಪ್ರತಿಕ್ರಿಯೆ ನೀಡಿ, "ಮೊದಲು ನಿಮ್ಮ ಪಕ್ಷ ಜೋಡೋ(ಒಗ್ಗೂಡಿಸಿ)" ಎಂದು ಟೀಕಿಸಿತ್ತು.

ಎಂಟು ಶಾಸಕರು ಒಂದು ಗುಂಪಾಗಿ ಮುರಿದು ಹೋಗುವುದರೊಂದಿಗೆ - ಅದು ಪಕ್ಷದ ಮೂರನೇ ಎರಡರಷ್ಟು ಬಲ - ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಅವರನ್ನು ಅನರ್ಹಗೊಳಿಸಲಾಗುವುದಿಲ್ಲ. ಇವರಲ್ಲಿ ಮೈಕೆಲ್ ಲೋಬೋ ಅವರ ಪತ್ನಿ ಡೆಲಿಲಾ ಲೋಬೋ, ರಾಜೇಶ್ ಫಲ್ದೇಸಾಯಿ, ಕೇದಾರ್ ನಾಯ್ಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಸೇರಿದ್ದಾರೆ.

"ಇದು ಕಾಂಗ್ರೆಸ್ ಛೋಡೋ(ಕಾಂಗ್ರೆಸ್ ತೊರೆದು), ಬಿಜೆಪಿ ಕೋ ಜೋಡೋ(ಒಗ್ಗೂಡಿಸಿ)" ಎಂದು, ಶಾಸಕರು ಬದಲಾವಣೆಯನ್ನು ಘೋಷಿಸಿದ ಬಳಿಕ ಮೈಕೆಲ್ ಲೋಬೋ ವ್ಯಂಗ್ಯವಾಗಿ ಹೇಳಿದ್ದಾರೆ.

ಇಂದು ಬೆಳಗ್ಗೆ ವಿಧಾನಸಭೆ ಕಲಾಪ ನಡೆಯದ ಕಾರಣ ಸ್ಪೀಕರ್ ಜೊತೆ ಶಾಸಕರ ಸಭೆ ಊಹಾಪೋಹಗಳಿಗೆ ತೆರೆ ಎಳೆದಿದೆ. ನಂತರ ರಾಜ್ಯ ಬಿಜೆಪಿ ಮುಖ್ಯಸ್ಥ ಸದಾನಂದ ಶೇಟ್ ತನವಡೆ ಅವರು ಶಾಸಕರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.

ಇಂದು ಶ್ರೀ ಕಾಮತ್ ಅವರು, "ನಾವು ಕಾಂಗ್ರೆಸ್ ಬಗ್ಗೆ ಅತೃಪ್ತಿ ಹೊಂದಿದ್ದೇವೆ. ಗುಲಾಂ ನಬಿ ಆಜಾದ್ ಅವರೊಂದಿಗೆ ಏನಾಯಿತು ಎಂಬುದನ್ನು ನಾವು ನೋಡಿದ್ದೇವೆ" ಎಂದು ರಾಹುಲ್ ಗಾಂಧಿಯವರ ರಾಜಕೀಯ ಚಾಣಾಕ್ಷತೆಯನ್ನು ಪ್ರಶ್ನಿಸಿ ಇತ್ತೀಚೆಗೆ ಪಕ್ಷವನ್ನು ತೊರೆದ ಹಿರಿಯ ನಾಯಕರನ್ನು ಉಲ್ಲೇಖಿಸಿ ಹೇಳಿದರು. "ನಾವು ಪ್ರಧಾನಿ ನರೇಂದ್ರ ಮೋದಿ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಅವರೊಂದಿಗೆ ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ.", ಎಂದಿದ್ದಾರೆ.

ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೋ ಜುಲೈನಲ್ಲಿ ಪಕ್ಷಾಂತರ ಊಹಾಪೋಹದ ಕೇಂದ್ರದಲ್ಲಿದ್ದರು ಮತ್ತು ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅವರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಸ್ಪೀಕರ್ ಅವರನ್ನು ಕೇಳಿದೆ. ಪಕ್ಷವು ಮೈಕೆಲ್ ಲೋಬೊ ಅವರನ್ನು ವಿರೋಧ ಪಕ್ಷದ ನಾಯಕನ ಸ್ಥಾನದಿಂದ ತೆಗೆದುಹಾಕಿತು, ಆದರೆ ಬದಲಿಯನ್ನು ಹೆಸರಿಸಲಾಗಿಲ್ಲ.

English summary : Congress Chhodo: Out of 11 MLAs, 8 Goa Congress MLAs have joined the BJP

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...