ಟಿಪ್ಪರ್ ಹಾಗೂ ಬೈಕ್ ಡಿಕ್ಕಿಯಾಗಿ ಜಲಾಶಯ ನೋಡಲು ಸ್ನೇಹಿತಜೊತೆ ಹೋಗುತಿದ್ದ ವಿದ್ಯಾರ್ಥಿನಿ ಸ್ಥಳದಲ್ಲಿ ಸಾವು! | JANATA NEWS

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಟಿಪ್ಪರ್ ಹಾಗೂ ಬೈಕ್ ಡಿಕ್ಕಿಯಾಗಿ ವಿದ್ಯಾರ್ಥಿನಿ ಸ್ಥಳದಲ್ಲಿ ಸಾವನ್ನಪ್ಪಿರೋ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಬ್ರಿಡ್ಜ್ ಬಳಿ ಘಟನೆ ನಡೆದಿದೆ.
ಬೆಂಗಳೂರು ಮೂಲದ ಖಾಸಗಿ ಕಾಲೇಜು ವಿದ್ಯಾರ್ಥಿನಿ ಚೈತ್ರಾ (19) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂ ಕಾಂಪೋಸಿಟ್ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಚೈತ್ರಾ, ಎಂಇಎಸ್ ಕಾಲೇಜಿನ ತನ್ನ ಸ್ನೇಹಿತ ಲಿಖಿತ್ ಗೌಡನೊಂದಿಗೆ ಶ್ರೀನಿವಾಸ ಸಾಗರ ಜಲಾಶಯ ನೋಡಿಕೊಂಡು ಬೆಂಗಳೂರಿನತ್ತ ವಾಪಾಸ್ಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಚಿಕ್ಕಬಳ್ಳಾಪುರ ನಗರದ ಮೂಲಕ ವಾಪಸಂದ್ರದ ಸೇತುವೆ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ ಕಡೆ ಬರುವಾಗ ಬಾಗೇಪಲ್ಲಿ ಕಡೆಯಿಂದ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಚೈತ್ರಾ ಮೇಲೆ ಟಿಪ್ಪರ್ ಲಾರಿ ಹರಿದಿದೆ. ಲಿಖಿತ್ ಗೌಡ ಗಂಭೀರವಾಗಿ ಗಾಯಗೊಂಡಿದ್ದಾನೆ.
ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.