Thu,Sep29,2022
ಕನ್ನಡ / English

ಕಲ್ಯಾಣ ‌ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ‌ಅನುಷ್ಠಾನಗೊಳಿಸಲಾಗುವುದು | JANATA NEWS

17 Sep 2022
461

ಕಲಬುರಗಿ : ಕಲ್ಯಾಣ ‌ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ‌ಮಂಡಳಿಗೆ ಮುಂಬರುವ ವರ್ಷವೂ 3 ಸಾವಿರ ಕೋಟಿ ರು. ಹಂಚಿಕೆ ಮಾಡಲಾಗುವುದು. ಕಲಬುರಗಿಯಲ್ಲಿ ಜವಳಿ ‌ಪಾರ್ಕ್‌ಗೆ ಶೀಘ್ರ ಅಡಿಗಲ್ಲು ‌ಹಾಕಲಾಗುವುದು ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಘೋಷಿಸಿದರು.

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ, ಕಲ್ಯಾಣ ಕರ್ನಾಟಕ ಅಷ್ಟು ಸುಲಭವಾಗಿ ದೊರೆತಿಲ್ಲ.

ಈ ಭಾಗದ ವಿಮೋಚನೆಗೆ ನಾವು ಒಂದು ವರ್ಷ ಕಾಯಬೇಕಾಯಿತು. ಸರ್ದಾರ್ ವಲ್ಲಭಭಾಯಿ ಪಟೇಲರ ದಿಟ್ಟ ನಿಲುವು ಮತ್ತು ನೇತೃತ್ವದಿಂದ ನಿರ್ಧಾರದಿಂದ ಈ ಭಾಗ ಸಮಗ್ರ ಕರ್ನಾಟಕ ಸೇರುವಂತಾಯಿತು ಎಂದು ಕಲ್ಯಾಣ ಕರ್ನಾಟಕ ವಿಮೋಚನೆಗೆ ಶ್ರಮಿಸಿದ ಗಣ್ಯರು ಹಾಗೂ ಈ ಭಾಗಕ್ಕೆ ವಿಶೇಷ ಸ್ಥಾನಮಾನ ಒದಗಿಸಲು ಮಹನೀಯರು ಹೋರಾಟ ನಡೆಸಿದ್ದಾರೆ, ಎಂದು ಮುಖ್ಯಮಂತ್ರಿ ಸ್ಮರಿಸಿದರು.

ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದ ರಸ್ತೆಯಲ್ಲಿ 18.50 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಉದ್ಘಾಟಿಸಿದರು.

ಕಲಬುರಗಿ, ವಿಜಯಪುರದಲ್ಲಿ ಜವಳಿ ಪಾರ್ಕ್ ಆರಂಭಿಸಲಾದ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಿದ್ದೇವೆ. ಎರಡೂ ಕಡೆ ಪಾರ್ಕ್ ಆರಂಭಕ್ಕೆ ಮಂಜೂರಾತಿ ನೀಡಲಿದ್ದು, ಶೀಘ್ರ ‌ಕಲಬುರಗಿಗೆ ಮತ್ತೆ ಬಂದು ಅಡಿಗಲ್ಲು ಹಾಕಲಿದ್ದೇನೆ ಎಂದರು.

ಬೀದರ್-ಶ್ರೀರಂಗಪಟ್ಟಣ‌ ಹೆದ್ದಾರಿಯು ಬಳ್ಳಾರಿಯಿಂದ ಕಲಬುರಗಿವರೆಗೆ ಅಭಿವೃದ್ಧಿ ಆಗಿಲ್ಲ. ಇದನ್ನು ಸರ್ಕಾರಿ, ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಂಡು ನಾಲ್ಕು ಪಥದ ರಸ್ತೆಯನ್ನು ನಿರ್ಮಿಸಲಾಗುವುದು.

ಕಲ್ಯಾಣ ಕರ್ನಾಟಕ ‌ಭಾಗದಲ್ಲಿ 2100 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಹೊಸದಾಗಿ 68 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಂಜೂರಾತಿ ನೀಡಲಾಗಿದೆ. 14 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತಲಾ 8 ಕೋಟಿ ರು. ವೆಚ್ಚದಲ್ಲಿ ಸಮುದಾಯ ಆರೋಗ್ಯ ‌ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದರು.

janata

ಇದೇ ಸಂದರ್ಭದಲ್ಲಿ ಎರಡು ಹೊಸ ಯೋಜನೆಗಳನ್ನು ಘೋಷಿಸಿದ ಅವರು, ಕಲ್ಯಾಣ ‌ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ‌ಅನುಷ್ಠಾನಗೊಳಿಸಲಾಗುವುದು. ಪ್ರತಿ ಗ್ರಾಮದ ಒಂದೊಂದು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 10 ಲಕ್ಷ ರು. ‌ನೆರವು‌ ನೀಡಲಾಗುವುದು. ಯುವ ಶಕ್ತಿ ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಎರಡು ಯುವ ಶಕ್ತಿ ಸಂಘಗಳಿಗೆ 1 ಲಕ್ಷ ನೆರವು ನೀಡಲಾಗುವುದು. ‌ಜೊತೆಗೆ ಇವರು ತಯಾರಿಸಿದ ವಸ್ತುಗಳಿಗೆ ಮಾರುಕಟ್ಟೆ ‌ಒದಗಿಸಲು ಒಪ್ಪಂದ ಮಾಡಿಕೊಳ್ಳಲಾಗುವುದು ಎಂದರು.

ರಾಜ್ಯ ಸರಕಾರ ರಾಯಚೂರು ಹಾಗೂ ಬಿಜಾಪುರದಲ್ಲಿ ಜವಳಿ ಪಾರ್ಕ್ ಮಾಡಲು ನಿರ್ಧರಿಸಿದೆ. ಇದರಿಂದ ಕನಿಷ್ಠ 25 ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ. ಶೀಘ್ರವೇ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಇದಲ್ಲದೆ ಬಳ್ಳಾರಿಯಲ್ಲಿ ಜೀನ್ಸ್‌ ಪಾರ್ಕ್, ಯಾದಗಿರಿಯಲ್ಲಿ ಫಾರ್ಮಾಸೂಟಿಕಲ್ ಕ್ಲಸ್ಟರ್ ನಿರ್ಮಿಸಲಾಗುವುದು. ಕೊಪ್ಪಳದಲ್ಲಿ ಈಗಾಗಲೇ ಆಟಿಕೆಗಳ ಕ್ಲಸ್ಟರ್ ನಿರ್ಮಾಣವಾಗುತ್ತಿದೆ. ಬೀದರ್‌ನಲ್ಲಿ ಕೇಂದ್ರದ ನೆರವಿನೊಂದಿಗೆ 90 ಕೋಟಿ ರೂ. ವೆಚ್ಚದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಕುರಿತ ಸಿಪೆಟ್ ಸಂಸ್ಥೆ ಪ್ರಾರಂಭಿಸಲಾಗುವುದು. ಹೀಗೆ ಪ್ರತಿ ಜಿಲ್ಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

RELATED TOPICS:
English summary :Kalaburagi: CM inaugurated the new building of Police Commissionerate

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...