ಭ್ರಷ್ಟಾಚಾರ ಆರೋಪ ಕೇಸ್: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಿಎಸ್ವೈ | JANATA NEWS

ಬೆಂಗಳೂರು : ಭ್ರಷ್ಟಾಚಾರ ಆರೋಪ ಕೇಸ್‌ನಲ್ಲಿ ಜನಪ್ರತಿ ನ್ಯಾಯಾಲವು ನೀಡಿರುವ ಆದೇಶವನ್ನು ಪ್ರಶ್ನೆ ಮಾಡಿ ಮಾಜಿ ಸಿಎಂ ಬಿಎಸ್ ಯಡಿಯ್ಯೂರಪ್ಪನವರು ಸುಪ್ರಿಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಆದರೆ, ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ದೂರು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಟಿ.ಜೆ. ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದೇ ವೇಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತನಿಖೆ ನಡೆಸಿ ವರದಿ ನೀಡಲು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿದೆ. ಈಹಿನ್ನಲೆಯಲ್ಲಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. .