ಶಾಲೆ-ಕಾಲೇಜುಗಳಲ್ಲಿ ಈ ವರ್ಷದಿಂದಲೇ ಭಗವದ್ಗೀತೆ ಬೋಧನೆ | JANATA NEWS

ಬೆಂಗಳೂರು : ಈ ವರ್ಷದಿಂದಲೇ ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಭೋದನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಪರಿಷತ್ನಲ್ಲಿಈ ಬಗ್ಗೆ ಮಾತಾಡಿದ ಎಂ.ಕೆ ಪ್ರಾಣೇಶ್, ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಭಗವದ್ಗೀತೆ ಬೋಧಿಸಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ? ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಕೇಳಿದರು.
ಇದಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯಿಸಿ, ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.
ಸರ್ಕಾರ ಈಗಾಗಲೇ ಭಗವದ್ಗೀತೆಯ ಭೋಧನೆಗೆ ಸಂಬಂಧ ಸಮಿತಿ ರಚನೆ ಮಾಡಿದೆ. ಶಿಕ್ಷಣ ಸಚಿವ ಬಿಸಿ ನಾಗೇಶ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು ಯಾವ ತರಗತಿಯಿಂದ ಯಾವ ತರಗತಿಗಳಿಗೆ ಯಾವ ಮಾದರಿಯಲ್ಲಿ ಭಗವದ್ಗೀತೆ ಭೋದನೆ ಮಾಡಬೇಕು? ಯಾವ ರೀತಿಯಲ್ಲಿ ನೈತಿಕ ಶಿಕ್ಷಣ ನೀಡಬೇಕು ಅಂತಾ ಸಮಿತಿ ಮಾಹಿತಿ ನೀಡಲಿದೆ. ಪ್ರತ್ಯೇಕವಾದ ಪಠ್ಯ ರಚನೆಯ ಮೂಲಕ ಮಕ್ಕಳಿಗೆ ಗೀತೆ ಭೋದನೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಗುಜರಾತ್ ಹಾಗೂ ಬನಾರಸ್ ವಿವಿ ಮಾಡಲ್ ಫಾಲೋ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದರು
ಈ ವರ್ಷದಿಂದಲೇ ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಭೋದನೆಗೆ ಶಿಕ್ಷಣ ಇಲಾಖೆ ಚಿಂತಿಸಿದ್ದು ಪ್ರಾಥಮಿಕ ಹಂತದಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 6-12 ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಭೋದನೆಗೆ ಪ್ಲಾನ್ ಮಾಡಿದೆ. ಭಗವದ್ಗೀತೆ, ರಾಮಾಯಣ ಮಹಾಭಾರತದ ತತ್ವಗಳು ಮತ್ತು ಮೌಲ್ಯಗಳನ್ನು ಕಲಿಸಲು ಶಿಕ್ಷಣ ಇಲಾಖೆ ಯೋಜನೆ ರೂಪಿಸುತ್ತಿದೆ.