PAYCM ಪೋಸ್ಟರ್ ಅಂಟಿಸಿದ್ದ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಎಫ್ಐಆರ್ | JANATA NEWS
ಬೆಂಗಳೂರು : ಪೇ ಸಿಎಂ ಪೋಸ್ಟರ್ ಅಂಟಿಸಿ ರಾಜ್ಯ ಸರ್ಕಾರವನ್ನ ಅಣಕಿಸಿದ್ದ ಪ್ರಕರಣ ಸಂಬಂಧ ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಕೇಸ್ ದಾಖಲಾಗಿದೆ. ಸದ್ಯ ಪೋಸ್ಟರ್ ಅಂಟಿಸಿದವರ ವಿರುದ್ಧ ಕೇಂದ್ರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದಾಗಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಪೇಟಿಯಂ ಮಾದರಿಯಲ್ಲಿ 'PayCM' ಎಂಬ ಪೋಸ್ಟರ್ಗಳನ್ನ ಚಿತ್ರಿಸಿ ಜಯಮಹಲ್ ರಸ್ತೆ, ಇಂಡಿಯನ್ ಎಕ್ಷ್ಪ್ರೆಸ್, ರೇಸ್ಕೋರ್ಸ್ ರಸ್ತೆ ಸೇರಿದಂತೆ ಹಲವು ಭಾಗಗಳಲ್ಲಿ ಅಂಟಿಸಲಾಗಿದೆ. ಪೋಸ್ಟರ್ನಲ್ಲಿ ಮೇಲ್ಗಡೆ PayCM ಎಂದು ಬರೆಯಲಾಗಿದೆ. ಕಳಗಡೆ QR code ಜೊತೆಗೆ ಸಿಎಂ ಬೊಮ್ಮಾಯಿ ಅವರ ಭಾವಚಿತ್ರವನ್ನ ಪ್ರಿಂಟ್ ಮಾಡಲಾಗಿದೆ.
ಮಾತ್ರವಲ್ಲ 40% ಇಲ್ಲಿ ಸ್ವೀಕರಿಸಲಾಗುತ್ತದೆ ಎಂದು ಕಳೆಗಡೆ ಬರೆಯಲಾಗಿದೆ. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈ ಕ್ಯೂಆರ್ ಕೋಡ್ನ್ನು ಮೊಬೈಲ್ ಮೂಲಕ ಸ್ಕ್ಯಾನ್ ಮಾಡಿದರೆ ಅದು ಬಳಕೆದಾರರನ್ನು ದೂರುಗಳಿಗಾಗಿ ಇತ್ತೀಚೆಗೆ ಕಾಂಗ್ರೆಸ್ ಬಿಡುಗಡೆ ಮಾಡಿದ '40% ಕಮಿಷನ್ ಸರ್ಕಾರ' ವೆಬ್ಸೈಟ್ಗೆ ಕರೆದೊಯ್ಯುತ್ತದೆ. ಪ್ರಸ್ತುತ ಬಿಜೆಪಿ ಆಡಳಿತದಲ್ಲಿ 40% ಕಮಿಷನ್ ದಂಧೆ ಹೇಗಿದೆ ಅನ್ನೋದನ್ನು ತೋರಿಸಲು ಈ ಪೋಸ್ಟರ್ಗಳನ್ನು ವಿನ್ಯಾಸಗೊಳಿಸಲಾಗಿದೆ ಎನ್ನಲಾಗುತ್ತಿದೆ.