Tue,Sep26,2023
ಕನ್ನಡ / English

ಕಂದಾಯ ಇಲಾಖೆ ದಾಖಲೆ ತಿದ್ದಿದ ಅಧಿಕಾರಿಗಳ ಮೇಲೆ ಕ್ರಿಮಿನಲ್‌ ಕೇಸ್‌ | JANATA NEWS

21 Sep 2022
2181

ಬೆಂಗಳೂರು : ಕಂದಾಯ ಇಲಾಖೆಯ ಕಾಗದ ಪತ್ರಗಳಲ್ಲಿ ಹೆಸರನ್ನು ಬದಲಾವಣೆ ಮಾಡಿದರೆ ಅವರು ಅಪರಾಧಿಗಳಾಗುತ್ತಾರೆ. ಮಾಡಿ ಕೊಟ್ಟವರು ಅಪರಾಧಿಗಳಾಗುತ್ತಾರೆ. ಇಬ್ಬರ ಮೇಲೆಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್‌ ಕೇಸ್‌ ದಾಖಲಿಸುತ್ತೇವೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಯಾದಗಿರಿ ಜಿಲ್ಲೆಯ ಕೊಡೆಕಲ್ ಗ್ರಾಮದಲ್ಲಿ ಸರ್ವೇ ನಂಬರ್ 72ರಲ್ಲಿ 15 ಎಕರೆ 10 ಗುಂಟೆ ಜಮೀನನ್ನು ಕೃಷ್ಣ ಭಾಗ್ಯ ಜಲ ನಿಗಮ ಯೋಜನೆಗೆ ತೆಗೆದುಕೊಂಡು ಪರಿಹಾರವನ್ನು ಕೂಡ ಕೊಟ್ಟಿದ್ದಾರೆ. ಅಲ್ಲಿನ ತಹಶೀಲ್ದಾರ್‌ ಹಾಗೂ ಅವರ ಸಿಬ್ಬಂದಿ ಸೇರಿ ಭ್ರಷ್ಟಾಚಾರ ಉದ್ದೇಶದಿಂದ ಖಾಸಗಿ ವ್ಯಕ್ತಿಗಳಾದ ಬಸಮ್ಮ ಕೋಂ ಚನ್ನಮಲ್ಲಪ್ಪ ಅದ್ನೂರಾ ಎಂಬ ಹೆಸರಿನಲ್ಲಿ ಪಹಣಿ ಬದಲಾಯಿಸಿ, ಹೆಸರು ಬದಲಾವಣೆ ಮಾಡಿದ್ದಾರೆ ಎಂದು ತಿಳಿಸಿದರು.

ಕೃಷ್ಣ ಭಾಗ್ಯ ಜಲ ನಿಗಮ ಪರಿಹಾರ ತೆಗೆದುಕೊಂಡು ತಹಶೀಲ್ದಾರ್‌ ಬಸಮ್ಮನವರ ಜೊತೆ ಸೇರಿ ಪಹಣಿ ಬದಲಾಯಿಸಿದ್ದಾರೆ. ಆ ರೀತಿ ಬದಲಾಯಿಸಲು ತಹಶೀಲ್ದಾರ್‌ಗೆ ಯಾವುದೇ ಅಧಿಕಾರ ಇಲ್ಲ. ಸರಿಯಾದ ದಾಖಲೆ ಇದ್ರೆ, ಉಪ ಆಯುಕ್ತರು ಬದಲಾವಣೆ ಮಾಡಬೇಕು.

ಈ ಕಾರಣಕ್ಕೆ ಕಂದಾಯ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಯನ್ನು ಸಸ್ಪೆಂಡ್ ಮಾಡಿದ್ದಾರೆ. ಆದರೆ, ತಹಶೀಲ್ದಾರ್‌ನನ್ನು ಸಸ್ಪೆಂಡ್‌ ಮಾಡಿಲ್ಲ. ತಕ್ಷಣ ತಹಶೀಲ್ದಾರ್‌ನನ್ನು ಸಸ್ಪೆಂಡ್ ಮಾಡಿ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗೋವಿಂದ ಕಾರಜೋಳ ಅವರು, ಈ ವಿಚಾರ ನನ್ನ ಗಮನಕ್ಕೆ ಬಂದೇ ಇರ್ಲಿಲ್ಲ. ಈಗ ಬಂದಿದೆ. ಭೂಸ್ವಾಧೀನವನ್ನು ಕಂದಾಯ ಇಲಾಖೆ ಅಧಿಕಾರಿಗಳು ಮಾಡಬೇಕು. ಹಾಗೇನಾದರೂ ಆಗಿದ್ದರೆ ಕಂದಾಯ ಇಲಾಖೆಗೆ ಸಂಬಂಧಿಸಿದ ತಹಶೀಲ್ದಾರ್‌ರೇ ಆಗಿರಬಹುದು. ಕೆಳಗಿನ ನೌಕರರೇ ಆಗಿರಬಹುದು. ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅವರನ್ನ ಸಸ್ಪೆಂಡ್ ಮಾಡಲು ಸರ್ಕಾರದಿಂದ ಸೂಚನೆ ಕೊಡುತ್ತೇವೆ. ಹಣವನ್ನ ರಿಕವರಿ ಮಾಡಲು ಡಿಸಿಗೆ ಹೇಳುತ್ತೇನೆ. ಕ್ರಿಮಿನಲ್ ಕೇಸ್ ಹಾಕೋಣ, ತಕ್ಷಣ ಯಾದಗಿರಿ ಜಿಲ್ಲಾಧಿಕಾರಿಗೆ ಸೂಚನೆ ಕೊಡ್ತೀನಿ ಎಂದು ತಿಳಿಸಿದರು.

RELATED TOPICS:
English summary :Criminal case against officials who tampered with revenue department records

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...