Thu,Sep29,2022
ಕನ್ನಡ / English

ಎಲ್ಲಾ ಶಾಸಕರು ಸೇರಿ ಪೇಸಿಎಂ ಪೋಸ್ಟರ್ ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿಕೆಶಿ | JANATA NEWS

22 Sep 2022
485

ಬೆಂಗಳೂರು : 'ಪೇಸಿಎಂ' ಪೋಸ್ಟರ್ ಅಂಟಿಸಿದ್ದ ಪ್ರಕರಣ ಸಂಬಂಧ ಐವರು ಕಾಂಗ್ರೆಸ್​ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯದಲ್ಲಿ ಭುಗಿಲೆದ್ದಿರುವ ಪೇ ಸಿಎಂ ಪೋಸ್ಟರ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನಾಳೆ ನಮ್ಮ ಎಲ್ಲಾ ಶಾಸಕರು ಸೇರಿ 'ಪೇಸಿಎಂ' ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ ಎಂದು ಹೇಳಿದ್ದಾರೆ.

ನಾಳೆ ಸರ್ಕಾರಿ ಕಟ್ಟಡಗಳ ಮೇಲೆ ಪೇಸಿಎಂ ಪೋಸ್ಟರ್ ಅಂಟಿಸುತ್ತೇವೆ. ಬಿಜೆಪಿಯವರು ಅಧಿಕಾರ ದುರ್ಬಳಕೆ, ದ್ವೇಷದ ರಾಜಕಾರಣ ಮಾಡ್ತಿದ್ದಾರೆ. ರಾತ್ರೋರಾತ್ರಿ ಅರೆಸ್ಡ್ ಮಾಡಿರುವುದನ್ನು ಖಂಡಿಸುತ್ತೇನೆ. ಬಿಬಿಎಂಪಿಯವರಿಗೆ ಕಣ್ಣಿಲ್ವಾ? ಜನೋತ್ಸವದ್ದು ಅಷ್ಟೊಂದು ಪೋಸ್ಟರ್ ಹಾಕಿಲ್ವಾ? ಮುನಿರತ್ನ, ಸುಧಾಕರ್​ ಎಲ್ಲರೂ ಪೋಸ್ಟರ್ ಹಾಕಿಲ್ವಾ? ಇದರ ವಿರುದ್ಧ ಬಿಬಿಎಂಪಿ ಯಾಕೆ ಕೇಸ್ ಹಾಕಿಲ್ಲ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.

"ಮುಖ್ಯಮಂತ್ರಿಗಳು ಪೋಸ್ಟರ್ ವಿಚಾರಕ್ಕೆ ಇಷ್ಟು ತಲೆ ಕೆಡಿಸಿಕೊಂಡು ಗಾಬರಿಯಾಗಿರುವುದು ಏಕೆ..? ಈ ಪೋಸ್ಟರ್ ಅಂಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದು ಏಕೆ..?" ಎಂದು ಪ್ರಶ್ನಿಸಿದರು.

ಬಿಜೆಪಿ ಅವರು ನಮ್ಮ ಬಗ್ಗೆಯೂ ಕ್ಯೂಆರ್ ಕೋಡ್ ಹಾಕಿದ್ದಾರೆ. ನಾನು ವಿಚಾರಣೆಗೆ ಹೋದ ಸಮಯದಲ್ಲಿ ನಾನು ಕಂಬಿ ಹಿಂದೆ ಇರುವಂತೆ ಮಾಧ್ಯಮಗಳು ಫೋಟೋ ಹಾಕಿದ್ದರು. ಹಾಗೆಂದು ನಾನು ಅವರ ವಿರುದ್ಧ ದೂರು ನೀಡಲು ಸಾಧ್ಯವೇ..? ಎಂದರು.

ಪೇಸಿಎಂ ಪೋಸ್ಟರ್​ ಹಾಕಿದ ಬಳಿಕ ಬಿಜೆಪಿಯವರು ನನ್ನ ಮತ್ತು ಸಿದ್ದರಾಮಯ್ಯರ ಫೋಟೋವನ್ನೂ ಪೋಸ್ಟರ್ ಮಾಡಿದ್ದಾರೆ. ಶೇ.40 ಕಮಿಷನ್​ ಸರ್ಕಾರ ಎಂದು ನಾವು ಆರೋಪ ಮಾಡಿದ್ದೇವಾ? ಭ್ರಷ್ಟಾಚಾರ ವಿಚಾರವಾಗಿ ಬೊಮ್ಮಾಯಿ ಸರ್ಕಾರದ ವಿರುದ್ಧ ವಿವಿಧ ರೀತಿಯಲ್ಲಿ ಜನರಿಗೂ ವಿಚಾರ ಮುಟ್ಟಿಸಬೇಕಾಗುತ್ತದೆ. ಹೀಗಾಗಿ ಈ ರೀತಿ ಮಾಡಲಾಗಿದೆ. ಇದರಲ್ಲಿ ಯಾವುದೇ ತಪ್ಪಿಲ್ಲ. ಇದು ಆರೋಗ್ಯಕರ ರಾಜಕೀಯ. ನಾಳೆ ನಾವು ಸರ್ಕಾರಿ ಕಟ್ಟಡಗಳ ಮೇಲೆ ಪೇಸಿಎಂ ಪೋಸ್ಟರ್​ ಅಂಟಿಸುತ್ತೇವೆ ಎಂದು ಡಿಕೆಶಿ ಹೇಳಿದರು.

RELATED TOPICS:
English summary :All MLAs will put up PACM poster in government offices: D.K. Shivakumar

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...