Sat,Apr27,2024
ಕನ್ನಡ / English

ಸಾವಲ್ಲೂ ಸಾರ್ಥಕತೆ ಮೆರದ ಪಿಯು ವಿದ್ಯಾರ್ಥಿನಿ | JANATA NEWS

22 Sep 2022
4808

ಚಿಕ್ಕಮಗಳೂರು : ಬಸ್ಸಿನಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ ಮೊದಲ ಪಿಯುಸಿ ವಿದ್ಯಾರ್ಥಿನಿ ರಕ್ಷಿತಾ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ನೋವಿನಲ್ಲೂ ಪಾಲಕರು ಮಗಳ ಅಂಗಾಂಗ ದಾನ ಮಾಡಿದ್ದು, ಸಾವಿನಲ್ಲೂ ಯುವತಿ ಸಾರ್ಥಕತೆ ಮೆರೆದಿದ್ದಾರೆ.

ಕಡೂರು ತಾಲೂಕಿನ ಸೋಮನಹಳ್ಳಿ ತಾಂಡಾದ ಶೇಖರ್ ನಾಯ್ಕ ಮತ್ತು ಲಕ್ಷ್ಮೀಬಾಯಿ ದಂಪತಿಯ ಪುತ್ರಿ ಎಸ್.ಎಚ್. ರಕ್ಷಿತಾಬಾಯಿ(17) ಸಾವಲ್ಲೂ ಸಾರ್ಥಕತೆ ಮೆರೆದಿದ್ದಾಳೆ. ಚಿಕ್ಕಮಗಳೂರಿನ ಬಸವನಹಳ್ಳಿಯ ಬಾಲಕಿಯರ ಪಿಯು ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು ಹಾಸ್ಟೆಲ್‌ನಲ್ಲಿದ್ದು ಇರುತ್ತಿದ್ದಳು.

ಎಂದಿನಂತೆ ಸೆ.18ರಂದು ಚಿಕ್ಕಮಗಳೂರಿನ ಸಂಬಂಧಿಕರ ಮನೆಗೆ ಬಸ್ಸಿನಲ್ಲಿ ಹೊರಟಿದ್ದಳು. ಮಾರ್ಗಮಧ್ಯೆ ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್ ಬಳಿ ಬಸ್‌ನಿಂದ ಆಯತಪ್ಪಿ ಬಿದ್ದ ರಕ್ಷಿತಾಬಾಯಿ ತಲೆಗೆ ಗಂಭೀರ ಪೆಟ್ಟಾಗಿತ್ತು. ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಮಿದುಳು ನಿಷ್ಕ್ರಿಯಗೊಂಡಿದೆ, ಈ ಸುದ್ದಿ ಕೇಳಿ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ.

ನೋವಿನಲ್ಲೂ ಪಾಲಕರು, ವೈದ್ಯರ ಸಲಹೆ ಮೇರೆಗೆ ಮಗಳ ಕಣ್ಣು, ಹೃದಯ, ಕಿಡ್ನಿ, ಶ್ವಾಸಕೋಶ, ಲಿವರ್​ ದಾನ ಮಾಡಲು ಒಪ್ಪಿಗೆ ಸೂಚಿಸಿದರು.

ಪೋಷಕರ ಒಪ್ಪಿಗೆಯಂತೆ ವೈದ್ಯರು ರಕ್ಷಿತಾಳ ಬಹು ಅಂಗಾಂಗ ದಾನಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ನಡೆಸಿದ್ದು, ವಿಶೇಷ ವೈದ್ಯರ ತಂಡವು ಜಿಲ್ಲಾಸ್ಪತ್ರೆಗೆ ಬಂದಿದ್ದು ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ, ಅದರಂತೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿರುವ ರೋಗಿಯೊಬ್ಬರಿಗೆ ಹೃದಯ ಕಸಿ ಮಾಡುವ ಉದ್ದೇಶದಿಂದ ರಕ್ಷಿತಾಳ ಹೃದಯವನ್ನು ವಿಶೇಷ ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು.

RELATED TOPICS:
English summary :Heart of brain disabled young woman sent to Bangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...