ದೇಶದ ಹಿತದೃಷ್ಟಿಯಿಂದ ರಾಹುಲ್ ಗಾಂಧಿಯವರೇ ಪುನಃ ಕಾಂಗ್ರೆಸ್ ಅಧ್ಯಕ್ಷರಾಗಲಿ: ಮಲ್ಲಿಕಾರ್ಜುನ ಖರ್ಗೆ | JANATA NEWS

ಕಲಬುರಗಿ : ದೇಶದ ಹಿತದೃಷ್ಟಿಯಿಂದ ರಾಹುಲ್ ಗಾಂಧಿ ಅವರೇ ಅದ್ಯಕ್ಷರಾಗಬೇಕು ಎಂಬುದು ನನ್ನ ಅಭಿಲಾಷೆಯಾಗಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಕಲಬುರಗಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಗಾಂಧಿ ಕುಟುಂಬದವರು ಯಾರು ವಹಿಸಿಕೊಳ್ಳಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಆದರೆ ನಾನು ಎಐಸಿಸಿ ಅಧ್ಯಕ್ಷ ಸ್ಥಾನದ ಅಕಾಂಕ್ಷಿ ಅಲ್ಲ ಎಂದರು.
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ನಾನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ನಾವ್ಯಾರೂ ಅಧ್ಯಕ್ಷರಾಗುವುದಿಲ್ಲ ಎಂದಿದ್ದರು. ಆದರೆ ದೇಶದ ಹಿತದೃಷ್ಟಿಯಿಂದ ರಾಹುಲ್ ಗಾಂಧಿ ಅವರೇ ಅದ್ಯಕ್ಷರಾಗಬೇಕು. ಇನ್ಮೊಮ್ಮೆ ಅವರ ಮನವೊಲಿಸಲು ಪ್ರಯತ್ನಿಸುವೆ, ಆದರೆ ಅವರು ನಮ್ಮ ಮಾತನ್ನು ಕೇಳುತ್ತಿಲ್ಲ. ಇನ್ನೂ ಮುಂದೆ ಪಕ್ಷದ ಆಂತರಿಕೆ ಚುನಾವಣೆ ಪ್ರಕ್ರಿಯೆ ನಡೆದಿವೆ ಎಂದ ಅವರು, ನಾನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿಲ್ಲ. ಅಂದ ಮೇಲೆ ನಾನು ಅಧ್ಯಕ್ಷರಾಗುವ ಹಾಗಿಲ್ಲ. ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಯಾವ ಜವಾಬ್ದಾರಿ ನೀಡುತ್ತಾರೋ ಅದನ್ನು ನಿರ್ವಹಿಸುವೆ ಎಂದು ಹೇಳಿದರು.