Thu,Apr25,2024
ಕನ್ನಡ / English

ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಪುನಾರಂಭವಾಗಿದೆ, ಆತಂಕ ಬೇಡ, ಪೂರಕ ಕ್ರಮ ಕೈಗೊಳ್ಳಲಾಗಿದೆ! | JANATA NEWS

25 Sep 2022
2089

ಬೆಂಗಳೂರು : ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಪುನಾರಂಭವಾಗಿದೆ. ಮಧ್ಯಾಹ್ನ 2 ಗಂಟೆಯಿಂದ ಬ್ಯಾಕಪ್​ ಸರ್ವರ್​ ಕೆಲಸ ಮಾಡುತ್ತಿದೆ ಎಂದು ನಗರದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಹೇಳಿಕೆ ನೀಡಿದರು.

ಆಂಬ್ಯುಲೆನ್ಸ್ ಸೇವೆಗಳ ಸಹಾಯವಾಣಿಯಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಸೃಷ್ಟಿಯಾಗಿದ್ದು ಅದಕ್ಕೆ ಪೂರಕವಾಗಿ ಕ್ರಮ ತೆಗೆದುಕೊಳ್ಳಲಾಗಿದೆ. ರಾಜ್ಯದ ಜನರು ಈ ಕುರಿತು ಯಾವುದೇ ಆತಂಕಕ್ಕೊಳಗಾಗುವುದು ಬೇಡ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಐಟಿ ಹಾರ್ಡ್‌ವೇರ್‌ನಲ್ಲಿ ಸಮಸ್ಯೆ ಸೃಷ್ಟಿಯಾಗಿದ್ದು, ಅದನ್ನು ಗುತ್ತಿಗೆ ಪಡೆದುಕೊಂಡಿರುವ GVK - EMRI ಸಂಸ್ಥೆ ಶೀಘ್ರದಲ್ಲೇ ಬಗೆಹರಿಸಲಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗಬಾರದು ಅನ್ನುವ ನಿಟ್ಟಿನಲ್ಲಿ ಇಲಾಖೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. 108 - ಸಹಾಯವಾಣಿ ಕರೆಗಳು ಆಟೋಮ್ಯಾಟಿಕ್ ಆಗಿ ಕರೆಗಳನ್ನು ಸ್ವೀಕರಿಸಿ 2 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ವಾಹನ ಹಂಚಿಕೆ ಕಾರ್ಯ ಮಾಡುತ್ತಿತ್ತು.

ಆಯಂಬುಲೆನ್ಸ್​ ಸೇವೆಯಲ್ಲಿ ವ್ಯತ್ಯಯವಾಗಿದ್ದಕ್ಕೆ ಕ್ಷಮೆಯಾಚಿಸುವೆ. ಐಟಿ ಹಾರ್ಡ್​ವೇರ್​ ವೈರಸ್​ನಿಂದ ತಾಂತ್ರಿಕ ಸಮಸ್ಯೆಯಾಗಿದೆ. 2008ರಲ್ಲಿ ಅಳವಡಿಸಿದ್ದ ಸಿಸ್ಟಮ್​ನಲ್ಲಿ ತಾಂತ್ರಿಕ ಸಮಸ್ಯೆಯಾಗಿದೆ. ಮದರ್​ ಬೋರ್ಡ್​ ನಾಳೆ ಸರಿಯಾಗಲಿದೆ. ಇನ್ನೊಂದು ಮದರ್ ಬೋರ್ಡ್​ ಖರೀದಿಸಿ ಅಳವಡಿಸುತ್ತೇವೆ. ಹೊಸ ಮದರ್ ಬೋರ್ಡ್​ ಅಳವಡಿಸಿದರೆ ಸಮಸ್ಯೆ ಉಂಟಾಗಲ್ಲ ಎಂದು ಹೇಳಿದರು.

ಕಳೆದ ಕೆಲವು ಗಂಟೆಗಳಿಂದ ಐಟಿ ಹಾರ್ವರ್ಡ್ ಸಮಸ್ಯೆ ಆಗಿತ್ತು. ಕಾಲ್ ಥ್ರೂ ಆಗುತ್ತಿರಲಿಲ್ಲ. ಇಂಜಿನಿಯರ್ ಟೀಮ್ ಕರೆಸಿ ಈಗ ಸಮಸ್ಯೆ ಬಗೆ ಹರಿಸುತ್ತಿದ್ದೇವೆ. 2008ರಲ್ಲಿ ಇದ್ದಂತಹ ಮದರ್ ಬೋರ್ಡ್ ಇದು. 15 ವರ್ಷದ ಹಳೆ ಸಿಸ್ಟಮ್ ಹೀಗಾಗಿ ಆ ಸಮಸ್ಯೆ ಆಗಿದೆ. ಮದರ್ ಬೋರ್ಡ್ ಸಂಪೂರ್ಣ ಸಮಸ್ಯೆ ಇತ್ತು. ಹೀಗಾಗಿ ಇಡೀ ರಾಜ್ಯದ ಎಲ್ಲಾ ಆರೊಗ್ಯ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಸಭೆ ಮಾಡಲಾಗಿದೆ ಎಂದು ಹೇಳಿದರು.

108 -ಸಹಾಯವಾಣಿ ಕರೆಗಳು ಆಟೋಮ್ಯಾಟಿಕ್ ಆಗಿ ಕರೆಗಳನ್ನು ಸ್ವೀಕರಿಸಿ 2 ನಿಮಿಷಗಳಲ್ಲಿ ಆಂಬುಲೆನ್ಸ್ ವಾಹನ ಹಂಚಿಕೆ ಕಾರ್ಯ ಮಾಡುತ್ತಿತ್ತು. ತಾಂತ್ರಿಕ ಸಮಸ್ಯೆಯಿಂದ ಈಗ ಈ ಪ್ರಕ್ರಿಯೆಗೆ 6 ರಿಂದ 7 ನಿಮಿಷಗಳ ಕಾಲ ತೆಗೆದುಕೊಳ್ಳಲಾಗುತ್ತಿದೆ. ಪ್ರತಿದಿನ 7 ರಿಂದ 8 ಸಾವಿರ ಕರೆಗಳ ಬದಲು 2 ರಿಂದ 2.5 ಸಾವಿರ ಕರೆಗಳನ್ನು ಮಾತ್ರ ಸ್ವೀಕರಿಸಲು ಸಾಧ್ಯವಾಗುತ್ತಿದೆ ಎಂದು ವಿವರಿಸಿದ್ದಾರೆ.

ಈಗಾಗಲೇ ಎಲ್ಲ ಆಸ್ಪತ್ರೆಗಳಿಗೆ ಇಂಟರ್ ಫೆಸಿಲಿಟಿ ಟ್ರಾನ್ಸ್‌ಫರ್‌ಗಳಿಗೆ ಮೊದಲ ಆದ್ಯತೆ ನೀಡಬೇಕೆಂದು ಸೂಚಿಸಲಾಗಿದೆ. ಆಂಬುಲೆನ್ಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ತಮ್ಮ ವೈಯಕ್ತಿಕ ಮೊಬೈಲ್ ಸಂಖ್ಯೆಗಳಿಗೂ ಕರೆ ಬಂದರೆ ಸ್ವೀಕರಿಸಿ ಅಗತ್ಯ ಸೇವೆಗಳನ್ನು ಮಾಡಬೇಕೆಂದು ಸೂಚಿಸಲಾಗಿದೆ. ಮ್ಯಾನ್ಯುವಲ್ ಐಡಿಗಳನ್ನು ಕ್ರಿಯೇಟ್ ಮಾಡಿ ಆ ಮೂಲಕವೂ ಜನರಿಗೆ ತುರ್ತು ಸೇವೆ ಒದಗಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

RELATED TOPICS:
English summary :108 ambulance service has resumed in the state, do not worry, supplementary measures have been taken!

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...