Fri,Dec09,2022
ಕನ್ನಡ / English

ಒಂದೇ ಶಾಲೆಯಿಂದ ಕಾಣೆಯಾಗಿದ್ದ ಬಾಲಕಿಯರು ಪತ್ತೆ, ಬಾಲಕಿಯರು ಪರಸ್ಪರ ಮದುವೆಯಾಗಲು ನಿರ್ಧರಿಸಿ... | JANATA NEWS

27 Sep 2022
638

ಬೆಂಗಳೂರು : ಒಂದೇ ಶಾಲೆಯ ಮೂವರು ಬಾಲಕಿಯರು ಕಾಣೆಯಾಗಿದ್ದು ಆತಂಕಕ್ಕೆ ಕಾರಣವಾಗಿತ್ತು. ಮೂವರು ವಿದ್ಯಾಥಿನಿಯರು 20 ದಿನಗಳ ಬಳಿಕ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ತಮಿಳುನಾಡು ಪೊಲೀಸರು ಬಾಲಕಿಯರನ್ನು ಬೆಂಗಳೂರಿಗೆ ಕರೆತಂದು ಪಾಲಕರ ಬಳಿಗೆ ಸೇರಿಸಿದ್ದಾರೆ.

ತಮಿಳುನಾಡಿಗೆ ತೆರಳಿದ್ದ ಮೂವರು ಬಾಲಕಿಯರ ಪೈಕಿ ಇಬ್ಬರು‌ ಪ್ರೀತಿಸಿ ಮದುವೆ ಮಾಡಿಕೊಳ್ಳಲು ಸಿದ್ಧತೆ ನಡೆಸಿಕೊಂಡಿದ್ದರು ಎಂಬ ವಿಚಾರ ಗೊತ್ತಾಗಿದೆ. ಪುಲಕೇಶಿನಗರ‌ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಮೂವರು ವಿದ್ಯಾರ್ಥಿಯರು ವ್ಯಾಸಂಗ ಮಾಡುತ್ತಿದ್ದರು.

ಇಬ್ಬರು ಶಾಲಾ ಹಾಸ್ಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರೆ ಮತ್ತೋರ್ವ ಬಾಲಕಿ ಮನೆಯಿಂದಲೇ ಶಾಲೆಗೆ ತೆರಳುತ್ತಿದ್ದರು. 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಗೆ ತಂದೆ-ತಾಯಿ ಇರಲಿಲ್ಲ. ಇನ್ನು 9 ನೇ ತರಗತಿ ಓದುತ್ತಿದ್ದ ಮತ್ತೋರ್ವ ಬಾಲಕಿಗೆ ತಾಯಿ ಇರಲಿಲ್ಲ. ಇಬ್ಬರು ಸಹ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದರು‌.

ಮತ್ತೊಬ್ಬ ಬಾಲಕಿಗೆ ಮಲತಾಯಿಯ ಮಕ್ಕಳಿಂದ ಕೊಲೆ ಬೆದರಿಕೆ ಬಂದಿತ್ತು! ಅಷ್ಟೇ ಅಲ್ಲ, ಜ್ಯೋತಿಷಿಯೊಬ್ಬ ನೀನು ಕೊಲೆ ಆಗುತ್ತೀಯಾ, ಎಂದು ಎಂದು ಭವಿಷ್ಯ ನುಡಿದಿದ್ದ ಎನ್ನಲಾಗಿದೆ.

ಇವರಲ್ಲಿಯೇ ಪರಸ್ಪರ ಸ್ನೇಹ ಬೆಳೆದು ಮನೆಯಿಂದ ದೂರ ಇರಲು ನಿರ್ಧರಿಸಿದ್ದರು. ಅದಕ್ಕಾಗಿ ಬಾಲಕಿಯರು ಮನೆಯಲ್ಲಿ ಕಷ್ಟವಿದೆ ಎಂದು ಸ್ನೇಹಿತೆಯರು ಮತ್ತು ಪರಿಚಯಸ್ಥರಿಂದ 30 ಸಾವಿರ ರೂ. ಸಂಗ್ರಹಿಸಿದ್ದರು. ಇದೇ ತಿಂಗಳು 6ರಂದು ಮಧ್ಯಾಹ್ನ ಹಾಸ್ಟೆಲ್ ವಾರ್ಡನ್ ಹಾಗೂ ಸೆಕ್ಯೂರಿಟಿ ಕಣ್ತಪ್ಪಿಸಿ ಲಗೇಜ್ ಸಮೇತ ತೊರೆದಿದ್ದರು.

ಚೆನ್ನೈ ರೈಲು ಹತ್ತಿ ಸೆ.7ರಂದು ಇಳಿದಿದ್ದಾರೆ. ಚೆನ್ನೈ ರೈಲು ನಿಲ್ದಾಣದಲ್ಲಿ ಸಂಜೆವರೆಗೂ ಕಾಲ ಕಳೆದಿದ್ದಾರೆ.

ಶಂಕಾಸ್ಪದವಾಗಿ ಓಡಾಡುತ್ತಿದ್ದ ಬಾಲಕಿಯರನ್ನು ಕಂಡ ರೈಲ್ವೆ ಪೊಲೀಸರು ಪ್ರಶ್ನಿಸಿದ್ದಾರೆ. ಆಗ ಬಾಲಕಿಯರು ಬೆಂಗಳೂರಿಗೆ ಹೋಗಬೇಕು ಎಂದು ಹೇಳಿದಾಗ ಪೊಲೀಸರು ಬೆಂಗಳೂರು ರೈಲು ಹತ್ತಿಸಿದ್ದಾರೆ. ಮತ್ತೊಂದೆಡೆ ಮಕ್ಕಳು ಕಾಣೆ ಆಗಿರುವುದಾಗಿ ಪಾಲಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಲ್ಲೆಡೆ ಹುಡುಕಾಟ ಶುರು ಮಾಡಿದ್ದರು.

ಕಂಟ್ಮೋನೆಂಟ್​ ರೈಲು ನಿಲ್ದಾಣಕ್ಕೆ ಬಂದ ಬಾಲಕಿಯರು ಪೊಲೀಸರು ಕಾಣೆಯಾಗಿರುವ ತಮ್ಮ ಭಾವಚಿತ್ರಗಳನ್ನು ಅಂಟಿಸಿದ್ದ ಪ್ರಕಟಣೆ ಗಮನಿಸಿ ವಾಪಸ್​ ಚೆನ್ನೈಗೆ ತೆರಳಲು ನಿರ್ಧರಿಸಿ ಗೊತ್ತಾಗದೆ ದೆಹಲಿ ರೈಲಿಗೆ ಹತ್ತಿದ್ದಾರೆ. ಮಾರ್ಗಮಧ್ಯೆ ಮಾರ್ಗ ಬದಲಾಯಿಸಿ ಚೆನ್ನೈಗೆ ಹೋಗಿದ್ದಾರೆ.

ಬ್ಯಾಗ್​ನಿಂದ ಹಣ ತೆಗೆಯುತ್ತಿದ್ದ ದೃಶ್ಯ ನೋಡಿದ ಕಳ್ಳರು, ಹಣ ಸಮೇತ ಬ್ಯಾಗ್​ ಕಳವು ಮಾಡಿದ್ದರು. ಚೆನ್ನೈನಲ್ಲಿ ಹಣ ಇಲ್ಲದೆ ಕಂಗಾಲಾಗಿದ್ದ ಬಾಲಕಿಯರನ್ನು ಕರೆದು ಆಟೋ ಚಾಲಕ ಪ್ರಶ್ನಿಸಿದ್ದ. ಅದಕ್ಕೆ ತಮಿಳು ಬಲ್ಲ ವಿದ್ಯಾಥಿರ್ನಿಯರು ಅನಾಥರು. ಹಾಸ್ಟೆಲ್​ನಲ್ಲಿ ಹಿಂಸೆ ಕೊಡುತ್ತಿದ್ದರು. ಅದಕ್ಕೆ ಹೊರಗೆ ಬಂದಿದ್ದೇವೆ ಎಂದು ಅಳಲು ತೋಡಿಕೊಂಡಿದ್ದರು. ಆಟೋ ಚಾಲಕ, ಹೆಣ್ಣು ಮಕ್ಕಳನ್ನು ಚರ್ಚ್​ ನಡೆಸುತ್ತಿದ್ದ ಅನಾಥಾಲಯಕ್ಕೆ ಸೇರಿಸಿ ಮಿಕ್ಸಿ ತಯಾರಿಸುವ ಘಟಕಕ್ಕೆ ಕೆಲಸಕ್ಕೆ ಸೇರಿಸಿದ್ದ.

ಈ‌ ನಡುವೆ ಪೈಕಿ ಓರ್ವ ಬಾಲಕಿಯು ಕೆಲಸಕ್ಕೆ ಹೋಗುತ್ತಿದ್ದರು. ಮತ್ತೊರ್ವ ಬಾಲಕಿಯು ಹುಡುಗನ ರೀತಿಯಲ್ಲಿ ಓಡಾಡುತ್ತಿದ್ದಳು. ಮುಂದೆ ಮದುವೆಯಾಗಲು ಇಬ್ಬರು ಬಾಲಕಿಯರು ಸಿದ್ದತೆ ನಡೆಸಿಕೊಂಡಿದ್ದರು. ಎಂದು ತನಿಖೆಯ ವೇಳೆ ತಿಳಿದು ಬಂದಿದೆ.

ಬಾಲಕಿಯರು ಯಾರಿಗಾದರು ಪೋನ್ ಮಾಡಬೇಕಾದರೆ ಸ್ಥಳೀಯ ಕಾಯಿನ್ ಬೂತ್ ನಿಂದ ಕರೆ ಮಾಡಿ ಮಾತನಾಡುತ್ತಿದ್ದರು. ಸತತವಾಗಿ‌ ಶೋಧ ನಡೆಸಿದರೂ ಬಾಲಕಿಯರ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿರಲಿಲ್ಲ. ಈ ನಡುವೆ ಖರೀದಿಸಿದ್ದ ಹೊಸ ಮೊಬೈಲ್ ನಲ್ಲಿ ತಂದೆಗೆ ಬಾಲಕಿಯು ಮಿಸ್ ಕಾಲ್ ಕೊಟ್ಟಿದ್ದರು. ಮತ್ತೆ ಕರೆ ಮಾಡಿದರೂ ಮಾತನಾಡಿರಲಿಲ್ಲ. ಈ ಬಗ್ಗೆ ಪೊಲೀಸರಿಗೆ ಪೋಷಕರು ಮಾಹಿತಿ ನೀಡಿದ್ದರು‌. ಕೂಡಲೇ ಕಾರ್ಯಪ್ರವೃತ್ತರಾಗಿ ಚೆನ್ನೈಗೆ ತೆರಳಿ ಬಾಲಕಿಯರನ್ನು ಪತ್ತೆ ಹಚ್ಚಿ ನಗರಕ್ಕೆ‌ ಕರೆತಂದಿದ್ದಾರೆ.

RELATED TOPICS:
English summary :The missing girls from the same school are found, the girls decide to marry each other...

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...