Thu,May02,2024
ಕನ್ನಡ / English

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಕಿಂಗ್ ಪಿನ್ ದಿವ್ಯಾ ಅವರ ಪತಿ ರಾಜೇಶ್ ಗೆ ಜಾಮೀನು ಮಂಜೂರು | JANATA NEWS

27 Sep 2022
1954

ಬೆಂಗಳೂರು : ಪೊಲೀಸ್​ ಸಬ್​ ಇನ್​ಸ್ಟೆಕ್ಟರ್​ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾಗಿರುವ ದಿವ್ಯಾ ಹಾಗರಗಿ ಅವರ ಪತಿ ಕಲಬುರ್ಗಿಯ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಅಧ್ಯಕ್ಷ ರಾಜೇಶ್ ಹಾಗರಗಿಗೆ ಅವರಿಗೆ ಕರ್ನಾಟಕ ಹೈಕೋರ್ಟ್​ನ ಕಲಬುರಗಿ ವಿಭಾಗೀಯ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕಳೆದ ಆರು ತಿಂಗಳಿಂದ ಜೈಲಿನಲ್ಲಿದ್ದ ಪ್ರಕರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಅವರ ಪತಿ ರಾಜೇಶ್ ಹಾಗರಗಿಗೆ ಕಡೆಗೂ ಜಾಮೀನು ಸಿಕ್ಕಿದೆ. ರಾಜೇಶ್ ಹಾಗರಗಿ, ಕಲ್ಬುರ್ಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾಗಿದ್ದಾರೆ.

ಅಲ್ಲದೇ ಪ್ರಕರಣದ ಪ್ರಮುಖ ಕಿಂಗ್ ಪಿನ್ ಹಾಗೂ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಯವರ ಪತಿ. ಇವರ ಒಡೆತನದ ಜ್ಞಾನಜೋತಿ ಆಂಗ್ಲ ಮಾಧ್ಯಮ ಶಾಲಾ ಪರೀಕ್ಷೆ ಕೇಂದ್ರದಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿತ್ತು. ಹಾಗಾಗಿ ಈ ಪರೀಕ್ಷಾ ಕೇಂದ್ರದ ಕಾರ್ಯದರ್ಶಿ ಹಾಗೂ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಮತ್ತು ಅಧ್ಯಕ್ಷ ರಾಜೇಶ್ ಹಾಗರಿಗಿ, ಪರೀಕ್ಷಾ ಮೇಲ್ವಿಚಾರಕರಾಗಿದ್ದ ಶಾಲಾ ಶಿಕ್ಷಕರು ಸೇರಿದಂತೆ ಹಲವರನ್ನು ಸಿಐಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಕಳೆದ ಏಪ್ರೀಲ್ 18 ರಂದು ಬಂಧನಕ್ಕೊಳಗಾಗಿದ್ದ ರಾಜೇಶ ಹಾಗರಗಿಗೆ ಐದುವರೆ ತಿಂಗಳ ನಂತರ ಇಂದು ಜಾಮೀನು ದೊರೆತಿದೆ. ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ರಾಜೇಶ ಹಾಗರಗಿ, ದಿವ್ಯಾ ಹಾಗರಗಿ ಸೇರಿದಂತೆ ಆರೋಪಿಗಳೆಲ್ಲಾ ಕಲಬುರಗಿ ಜಿಲ್ಲಾ ಕೋರ್ಟನಲ್ಲಿ ಹಲವು ಬಾರಿ ಸಲ್ಲಿಸಿದ್ದ ಜಾಮೀನು ತಿರಸ್ಕಾರಗೊಂಡಿದ್ದವು.

ಜಾಮೀನು ಕೋರಿ ರಾಜೇಶ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ಜಿ.ಉಮಾ ಅವರ ನೇತೃತ್ವದ ಏಕಸದಸ್ಯ ಪೀಠ, ಹಗರಣದ ಪ್ರಮುಖ ಆರೋಪಿಯ ಪತಿ ಎಂಬ ಕಾರಣಕ್ಕೆ ಜಾಮೀನು ನಿರಾಕರಿಸಲಾಗದು ಎಂದು ಅಭಿಪ್ರಾಯ ಪಟ್ಟು ಅರ್ಜಿಯನ್ನು ಪುರಸ್ಕರಿಸಿದೆ.

ಅಲ್ಲದೇ, ಅರ್ಜಿದಾರರ ವಿರುದ್ಧ ಯಾವುದೇ ಗಂಭೀರವಾದ ಆರೋಪಗಳಿರುವ ಸಂಬಂಧ ಸಾಕ್ಷ್ಯಾಧಾರಗಳು ಇಲ್ಲ. ಪ್ರಮುಖ ಆರೋಪಿಯ ಪತಿ ಎಂಬ ಕಾರಣ ನೀಡಿ ಅರ್ಜಿದಾರರು ಜಾಮೀನಿಗೆ ಅರ್ಹ ಅಲ್ಲ ಎಂದು ಹೇಳಲಾಗದು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಸಾಕ್ಷ್ಯ ನಾಶಕ್ಕೆ ಮುಂದಾಗಬಾರದು. ಅನುಮತಿ ಇಲ್ಲದೇ ಠಾಣೆ ವ್ಯಾಪ್ತಿ ಬಿಟ್ಟು ಹೊರಕ್ಕೆ ಹೋಗಬಾರದು ಎಂದು ನ್ಯಾಯಪಪೀಠ ಆರೋಪಿಗೆ ಷರತ್ತುಗಳನ್ನು ವಿಧಿಸಿದೆ

RELATED TOPICS:
English summary :PSI Recruitment Illegal Case: King Pin Divya Husband Rajesh Granted Bail

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...