Sat,Apr27,2024
ಕನ್ನಡ / English

ಪಿಎಂ ನರೇಂದ್ರ ಮೋದಿ ನಾಯಕತ್ವದ ದೇಶದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಅವಕಾಶವಿಲ್ಲ: ಸಿಎಂ ಬೊಮ್ಮಾಯಿ | JANATA NEWS

28 Sep 2022
2206

ಬೆಂಗಳೂರು : ಪಿಎಂ ನರೇಂದ್ರ ಮೋದಿ ನಾಯಕತ್ವ ಇರುವ ಈ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲವೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪಿಎಫ್‌ಐ ಸಂಘಟನೆಯನ್ನು ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ನಿಷೇಧ ಹೇರಿದೆ. ಈ ಕುರಿತು ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಾಯಕತ್ವದಲ್ಲಿ ಕಾನೂನು ವಿರುದ್ಧ ಕೃತ್ಯಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪಿಎಫ್​ಐ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ.

ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ ಎಂದರು. ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿ.ಪಿ.ಎಂ ಎಲ್ಲರೂ ಕೂಡ ಪಿಎಫ್​ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ತಿಳಿಸಿದರು.

ವಿರೋಧ ಪಕ್ಷದವರಾದ ಕಾಂಗ್ರೆಸ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) (ಸಿಪಿಎಂ) ಸೇರಿ ಎಲ್ಲರೂ ಕೂಡ ಪಿಎಫ್‌ಐ ನಿಷೇಧಿಸಬೇಕು ಎಂದು ಬೇಡಿಕೆ ಇಟ್ಟಿದ್ದರು ಎಂದು ಅವರು ತಿಳಿಸಿದರು.

ಎಲ್ಲರ ಬೇಡಿಕೆಯಂತೆ ಇದೀಗ ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಜತೆ ವಿವಿಧ ಸಂಸ್ಥೆಗಳನ್ನು ನಿಷೇಧಿಸಿದೆ. ಈ ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಹ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು ಎಂದು ಮುಖ್ಯ ಮಂತ್ರಿಗಳು ಹೇಳಿದರು.

RELATED TOPICS:
English summary :No vandalism allowed in PM Narendra Modi country: CM Bommai

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...